ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ಸಭೆ

ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಶುಕ್ರವಾರ ಸಹಾಯಕ ಆಯುಕ್ತ ಡಾ,ಹಂಪಣ್ಣ ಸಜ್ಜನ ಅಧ್ಯಕ್ಷತೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್, ಡಿಎಚ್‌ಓ ಡಾ.ಸುರೇಂದ್ರ ಬಾಬು, ಆಯುಷ್ ಅಧಿಕಾರಿ ಡಾ.ಶಂಕರಗೌಡ ಇದ್ದರು.
ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಶುಕ್ರವಾರ ಸಹಾಯಕ ಆಯುಕ್ತ ಡಾ,ಹಂಪಣ್ಣ ಸಜ್ಜನ ಅಧ್ಯಕ್ಷತೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್, ಡಿಎಚ್‌ಓ ಡಾ.ಸುರೇಂದ್ರ ಬಾಬು, ಆಯುಷ್ ಅಧಿಕಾರಿ ಡಾ.ಶಂಕರಗೌಡ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳಿ ಎಸಿ ಸೂಚನೆ

ರಾಯಚೂರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜೂ.21 ರಂದು ಬೆಳಗ್ಗೆ 6.45ಗಂಟೆಗೆ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಸಾವಿರಾರು ಯೋಗಾಪಟುಗಳು ಭಾಗವಹಿಸುವರು ಇದಕ್ಕೆ ಬೇಕಾದ ಸಿದ್ಧತೆಯನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೈಗೊಳ್ಳಬೇಕೆಂದು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೋಗವನ್ನು ಕೇವಲ ಒಂದೇ ದಿನಕ್ಕೆ ಸೀಮಿತಗೊಳಿಸದೇ ಪ್ರತಿದಿನ ಯೋಗಾಸನಗಳನ್ನು ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆರೋಗ್ಯ ರಕ್ಷಣೆಗೆ ಯೋಗ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದರು.

ಅಂದು ಬೆಳಗ್ಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ,ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಸ್ಥೆಗಳ ಯೋಗ ಆಸಕ್ತರು ಭಾಗವಹಿಸಲಿದ್ದು, ಜೂ.18 ಮತ್ತು 19ರಂದು ಯೋಗ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಬೇಕು. ಕಾರ್ಯಕ್ರಮದ ಯಶಸ್ವಿಗಾಗಿ ವಿವಿಧ ಇಲಾಖೆಗಳಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದ್ದು, ಅವುಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಯೋಗ ನಡೆಯುವ ಸ್ಥಳದಲ್ಲಿ ಆಂಬುಲೆನ್ಸ್, ಕುಡಿಯುವ ನೀರು ಹಾಗೂ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಮಹಾನಗರ ಪಾಲಿಕೆಯಿಂದ ಸ್ವಚ್ಚತೆ ಹಾಗೂ ನೀರಿನ ವ್ಯವಸ್ಥೆ ಹಾಗೂ ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಯವರು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ತಮಗೆ ಅನುಕೂಲಕರವಾದ ಸಮಯದಲ್ಲಿ ಆನ್‌ಲೈನ್ ಮೂಲಕ ಯೋಗ ತರಬೇತಿಯನ್ನು ಪಡೆಯಬಹುದು. ಆನ್‌ಲೈನ್ ಮೂಲಕ ಯೋಗ ತರಬೇತಿಗೆ ನೋಂದಾಯಿಸಿಕೊಅಡು ಯೋಗಾಭ್ಯಾಸ ಮಾಡಬಹುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್, ಡಿಎಚ್‌ಓ ಡಾ.ಸುರೇಂದ್ರ ಬಾಬು, ಡಿಡಿಪಿಐ ಮಲ್ಲಿಕಾರ್ಜುನ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರವೀಣ ಕುಮಾರ್, ಡಿಡಿಪಿಯು ಸೋಮಶೇಖರಪ್ಪ ಹೋಕ್ರಾಣಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುನೀತಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ಆಹಾರ ಇಲಾಖೆ ವ್ಯವಸ್ಥಾಪಕ ಹರೀಶ್ ಡಿ., ಪಾಲಿಕೆಯ ಸಮುದಾಯ ಸಂಘಟನಾಧಿಕಾರಿ ಕೃಷ್ಣ ಕಟ್ಟಿಮನಿ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net