ಮಳೆಗಾಗಿ ಜೆಡಿಎಸ್ ಪಕ್ಷದಿಂದ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಪಾದಯಾತ್ರೆ

ಪಟ್ಟಣದ  ಗ್ರಾಮದೇವತೆಯಾದ ಮಾರಿಕಾಂಬಾ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಪಾದಯಾತ್ರೆಗೆ ಚಾಲನೆ ನೀಡಿದರು. ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ,ರಾಜ್ಯ ಜೆಡಿಎಸ್ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರನಾಯಕ, ತಾಲೂಕು ಅಧ್ಯಕ್ಷ  ಈರಣ್ಣ ಮರ್ಲಾಟ್ಟಿ, ಸಿರವಾರ ತಾಲೂಕು ಅಧ್ಯಕ್ಷ ಟಿ. ಮಲ್ಲಿಕಾರ್ಜುನ ಪಾಟೀಲ್ ಬಲ್ಲಟಗಿ, ಪ್ರಮುಖರಾದ  ಹೆಚ್.ಮೌನೇಶ್ ಗೌಡ, ಶರಣಪ್ಪಗೌಡ, ಬಾಷಸಾಬ್ ಇದ್ದರು.
ಪಟ್ಟಣದ ಗ್ರಾಮದೇವತೆಯಾದ ಮಾರಿಕಾಂಬಾ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಪಾದಯಾತ್ರೆಗೆ ಚಾಲನೆ ನೀಡಿದರು. ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ,ರಾಜ್ಯ ಜೆಡಿಎಸ್ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರನಾಯಕ, ತಾಲೂಕು ಅಧ್ಯಕ್ಷ ಈರಣ್ಣ ಮರ್ಲಾಟ್ಟಿ, ಸಿರವಾರ ತಾಲೂಕು ಅಧ್ಯಕ್ಷ ಟಿ. ಮಲ್ಲಿಕಾರ್ಜುನ ಪಾಟೀಲ್ ಬಲ್ಲಟಗಿ, ಪ್ರಮುಖರಾದ ಹೆಚ್.ಮೌನೇಶ್ ಗೌಡ, ಶರಣಪ್ಪಗೌಡ, ಬಾಷಸಾಬ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಾದಯಾತ್ರೆಯಲ್ಲಿ ಹಬ್ಬರದ ಮಳೆ

ಮಾನ್ವಿ ಮಳೆಗಾಗಿ ಪ್ರಾರ್ಥಿಸಿ ಜೆಡಿಎಸ್ ಪಕ್ಷದ ತಾಲ್ಲೂಕು ಘಟಕದಿಂದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದ ಮಾರಿಕಾಂಬಾ ದೇವಸ್ಥಾನದಿಂದ ನೀರಮಾನ್ವಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದವರೆಗೆ ಬೃಹತ್ ಪಾದಯಾತ್ರೆ ನಡೆಸಲಾಯಿತು.

ಪಾದಯಾತ್ರೆಯಲ್ಲಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಮುಂಗಾರು ಕೈಕೊಟ್ಟಿರುವುದರಿಂದ ಈ ಭಾಗದ ರೈತರ ಹಾಗೂ ಜನರ ಜೀವನಾಡಿಯಾಗಿರುವ ತುಂಗಭದ್ರಾ ನದಿಯ ಒಡಲು ಬರಿದಾಗಿರುವುದ್ದು, ರೈತರು ಸಂಕಷ್ಟದಲ್ಲಿದ್ದಾರೆ. ರೈತರು ಚೆನ್ನಾಗಿದ್ದರೆ ಮಾತ್ರ ನಾಡು ಸುಭಿಕ್ಷವಾಗಿರುತ್ತದೆ.

ರಾಜ್ಯದಲ್ಲಿ ಸಮೃದ್ದಿಯಾಗಿ ಮಳೆಯಾಗಿ ತುಂಗಭದ್ರಾ ಜಲಾಶಯ ತುಂಬಿದಲ್ಲಿ ಮಾತ್ರ ಈ ಭಾಗದ ಜನರ ಬದುಕು ಹಸನಾಗುತ್ತದೆ ಎನ್ನುವ ಉದ್ದೇಶದಿಂದ ಮಳೆಗಾಗಿ ಈಗಾಗಲೇ ಸಿಂಧನೂರಿನಿಂದ ಅಂಬಮಠದವರೆಗೆ ಪಾದಯಾತ್ರೆಯನ್ನು ಕೈಗೊಳ್ಳಲಾಯಿತು ಮುಂದುವರೆದು. ಮಾನ್ವಿಯಿಂದ ನೀರಮಾನ್ವಿ ಗ್ರಾಮದ ಗ್ರಾಮದೇವತೆ ಶ್ರೀ ರೇಣುಕ ಯಲ್ಲಮ್ಮ ದೇವಿ ದೇವಸ್ಥಾನದ ವರೆಗೆ ಪಾದಯಾತ್ರೆಯ ಮೂಲಕ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿನ ಜನರಿಗಾಗಿ ರೈತರಿಗಾಗಿ ಮಳೆ ನೀಡುವಂತೆ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ತಾಲೂಕಿನಲ್ಲಿ ಕಳೆದ 2 ತಿಂಗಳಿಂದ ಸಮರ್ಪಕವಾಗಿ ಮುಂಗಾರು ಮಳೆಯಾಗದೆ ಇರುವುದರಿಂದ ಬರಗಾಲದ ಪರಿಸ್ಥಿತಿ ಉಂಟಾಗಿದೆ. ರೈತರು ತೀವ್ರವಾದ ಸಂಕಷ್ಟದಲ್ಲಿ ಇದ್ದರೆ.ಮಳೆ ಇಲ್ಲದೆ ಬೆಳೆ ಒಣಗುತ್ತಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗು ಕೂಡ ತೊಂದರೆಯಾಗಿರುವುದರಿಂದ ಮಾನ್ವಿ ಜನತಾದಳ ಪಕ್ಷದಿಂದ ಲೋಕಕಲ್ಯಾಣಕ್ಕಾಗಿ ಹಾಗೂ ಮಳೆ ,ಬೆಳೆ ,ಸಮೃದ್ದಿಗಾಗಿ ತಾಲೂಕಿನ ಶಕ್ತಿದೇವತೆಯಾದ ನೀರಮಾನ್ವಿ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ವರೆಗೆ ಪಾದಯಾತ್ರೆಯ ಮೂಲಕ ತೆರಳಿ ವಿಶೇಷವಾದ ಪೂಜೆಯನ್ನು ಸಲ್ಲಿಸಿ ಮಳೆಗಾಗಿ ದೇವಿಯಲ್ಲಿ ಬೇಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರನಾಯಕ, ತಾಲೂಕು ಅಧ್ಯಕ್ಷ ಈರಣ್ಣ ಮರ್ಲಾಟ್ಟಿ, ಸಿರವಾರ ತಾಲೂಕು ಅಧ್ಯಕ್ಷ ಟಿ.ಮಲ್ಲಿಕಾರ್ಜುನ ಪಾಟೀಲ್ ಬಲ್ಲಟಗಿ, ಪ್ರಮುಖರಾದ ಹೆಚ್.ಮೌನೇಶ್ ಗೌಡ, ಶರಣಪ್ಪಗೌಡ, ಬಾಷಸಾಬ್ ಸೇರಿದಂತೆ ಇನ್ನಿತರರು ಇದ್ದರು.

ಬಾಕ್ಸ್
ಜೆಡಿಎಸ್ ಪಕ್ಷದಿಂದ ಮಾನ್ವಿ ಪಟ್ಟಣದಿಂದ ನೀರಮಾನ್ವಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದವರೆಗೆ ಪಾದಯಾತ್ರೆ ಆರಂಭಗೊಂಡಾಗ ಮಳೆ ಆರಂಭವಾಯಿತು. ಆದರೂ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ನೇತೃತ್ವದಲ್ಲಿ ಕಾರ್ಯಕರ್ತರು ಖುಷಿಯಲ್ಲಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಮಳ್ಳೆಯಲ್ಲಿ ಕುಣಿದು ಕುಪ್ಪಳಿಸಿದರೆ,
ಭಜನ ಮಂಡಳಿಯವರು ಶಿವನ ಕುರಿತು ಭಜನೆ, ಗ್ರಾಮೀಣ ಭಾಗದ ಮಹಿಳೆಯರು ಜನಪದ ಮಳೆ ಹಾಡುಗಳನ್ನು ಹಾಡುವುದು ವಿಶೇಷವಾಗಿ ಕಂಡು ಬಂದಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net