ನಿಷ್ಪಕ್ಷಪಾತ ಚುನಾವಣಾ ಕಾರ್ಯಕ್ಕೆ ಕೈಜೋಡಿಸಿ

ತುರ್ವಿಹಾಳದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ ನಡೆಯಿತು.
ತುರ್ವಿಹಾಳದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವೆಂಕಟರಮಣ ಹೇಳಿಕೆ
  • ತುರ್ವಿಹಾಳದಲ್ಲಿ ಜಾಗೃತಿ ಜಾಥಾ
ಸಿಂಧನೂರು: ಪ್ರತಿಯೊಬ್ಬ ಪ್ರಜೆಗೂ ಸಂವಿಧಾನ ನೀಡಿದ ವಿಶೇಷ ಅಧಿಕಾರ ಮತದಾನ. ಪ್ರಜಾಪ್ರಭುತ್ವದಲ್ಲಿ ಪ್ರತಿ ಮತವೂ ಅಮೂಲ್ಯ. ಈ ವಿಶೇಷ ಸವಲತ್ತಿನಿಂದ ಯಾರೂ ವಂಚಿತರಾಗಬಾರದು ಎಂದು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವೆಂಕಟರಮಣ ಹೇಳಿದರು.

ತುರ್ವಿಹಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತ ಜನಜಾಗೃತಿ ಜಾಥಾದಲ್ಲಿ ಮಾತನಾಡಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಪರಿಚಯಿಸುವ ನಿಟ್ಟಿನಲ್ಲಿ ಒಬ್ಬ ವ್ಯಕ್ತಿಗೆ ಒಂದು ಮತ ತತ್ವದ ಆಧಾರದ ಮೇಲೆ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಪರಿಷ್ಕರಣೆಯಲ್ಲಿ ಎಲ್ಲರೂ ಪಾಲ್ಗೊಂಡು ನ್ಯಾಯಯುತ ಹಾಗೂ ನಿಷ್ಪಕ್ಷಪಾತ ಚುನಾವಣಾ ಕಾರ್ಯಕ್ಕೆ ಶ್ರಮಿಸಬೇಕು ಎಂದರು.
ಪ್ರಾಚಾರ್ಯ ಡಾ.ಕೆ.ಖಾದರ್‌ಬಾಷಾ ಮಾತನಾಡಿ, ಪ್ರಜಾಪ್ರಭುತ್ವದ ಹಬ್ಬವೆಂದೇ ಪರಿಗಣಿಸಿರುವ ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು. ಎಸ್‌ಐಆರ್ ಸಮೀಕ್ಷೆಯನ್ನು ವಿದ್ಯಾರ್ಥಿಗಳು, ಪ್ರಜ್ಞಾವಂತ ನಾಗರಿಕರು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಅಮೋಘ ರೇವಣಸಿದ್ಧೇಶ್ವರ ಮಠದ ಮಾದಯ್ಯ ಗುರುವಿನ್, ಸಹಾಯಕ ಪ್ರಾಧ್ಯಾಪಕರಾದ ಹನುಮೇಶ, ಡಾ.ಚನ್ನಬಸವ, ಗಂಗಾಬಾಯಿ, ಅತಿಥಿ ಉಪನ್ಯಾಸಕ ನಾಗರಾಜ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net