ಏ.03 ರಂದು ಕಾಲಚಕ್ರ ನಾಟಕ ಪ್ರದರ್ಶನ

ರಂಗಸ್ವಾಮಿ
ರಂಗಸ್ವಾಮಿ
Published on

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಮಾತನಾಡಿ, ಮರಾಠಿ ಮೂಲದ ಜಯವಂತ ದಳ್ಳಿ ಅವರ ಕೃತಿಯನ್ನು ಎಚ್.ಕೆ. ಕರ್ಕೇರಾ ಕನ್ನಡಕ್ಕೆ ಅನುವಾದಿಸಿದ್ದು, ನಾಟಕಕ್ಕೆ ಹುಲುಗಪ್ಪ ಕಟ್ಟಿಮನಿ ವಿನ್ಯಾಸ ಹಾಗೂ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ. ವೆಂಕಟಸಿಂಗ್ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ವೀರಹನುಮಾನ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೋರಾಟಗಾರ ಬಸವರಾಜ್ ಕಳಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಕಲಬುರಗಿ ರಂಗಾಯಣದ ಸುಜಾತ ಜಂಗಮಶೆಟ್ಟಿ ಹಾಗೂ ಲೋಹಿಯಾ ಪ್ರತಿಷ್ಠಾನದ ನಿಕಟಪೂರ್ವ ಅಧ್ಯಕ್ಷ ಭೀಮನಗೌಡ ಇಟಗಿ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಲೋಹಿಯಾ ಪ್ರತಿಷ್ಠಾನದ ನಿಕಟಪೂರ್ವ ಅಧ್ಯಕ್ಷ ಭೀಮನಗೌಡ ಇಟಗಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net