ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಶ್ಯಾಮಸುಂದರ ಕುಂಬದಾಳ ಮಾತನಾಡಿ, ರಾಜ್ಯ ಸರ್ಕಾರ ಕಕ ಭಾಗಕ್ಕೆ ಶೈಕ್ಷಣಿಕ, ಸಾರಿಗೆ, ಆರೋಗ್ಯ, ಮೂಲಸೌಕರ್ಯಗಳಿಗಾಗಿ 2025-2026ನೇ ಸಾಲಿನ ಬಜೆಟ್‌ನಲ್ಲಿ 5 ಸಾವಿರ ಕೋಟಿ ರೂ. ಅನುದಾನ ನೀಡಿದೆ. ಆದರೆ, ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷೃದಿಂದ ಅನುದಾನ ಮರಳುತ್ತಿದೆ. ಇದಕ್ಕೆ ಪ್ರತ್ಯೇಕ ಇಜಿನಿಯರಿಂಗ್ ವಿಭಾಗ ಪ್ರಾರಂಭಿಸದೆ ಇರುವುದು ಕಾರಣವಾಗಿದೆ ಎಂದು ದೂರಿದರು.