ಆರ್‌ಟಿಪಿಎಸ್‌ಗೆ ಕೆಪಿಸಿಎಲ್ ಎಂಡಿ ಭೇಟಿ

ರಾಯಚೂರಿನ ಆರ್‌ಟಿಪಿಎಸ್ ಉಷ್ಣ ವಿದ್ಯುತ್ ಉತ್ಪಾದನಾ ಸ್ಥಾವರಕ್ಕೆ  ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ  ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಮಂಗಳವಾರ ಭೇಟಿ ನೀಡಿ,ಸ್ಥಾವರದ ಸಮಗ್ರ ಕಾರ್ಯನಿರ್ವಹಣೆ ಹಾಗೂ ವಿದ್ಯುತ್ ಉತ್ಪಾದನಾ ಪ್ರಕ್ರಿಯೆಯನ್ನು ಪರಿಶೀಲಿಸಿದರು. ನಿಗಮದ ಹಣಕಾಸು ನಿರ್ದೇಶಕ ಆರ್.ನಾಗರಾಜ, ತಾಂತ್ರಿಕ ನಿರ್ದೇಶಕ ಎಂಆರ್. ಗಂಗಾಧರ್, ಆರ್‌ಟಿಪಿಎಸ್ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಆರ್.ರಮೇಶ ಇದ್ದರು.
ರಾಯಚೂರಿನ ಆರ್‌ಟಿಪಿಎಸ್ ಉಷ್ಣ ವಿದ್ಯುತ್ ಉತ್ಪಾದನಾ ಸ್ಥಾವರಕ್ಕೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಮಂಗಳವಾರ ಭೇಟಿ ನೀಡಿ,ಸ್ಥಾವರದ ಸಮಗ್ರ ಕಾರ್ಯನಿರ್ವಹಣೆ ಹಾಗೂ ವಿದ್ಯುತ್ ಉತ್ಪಾದನಾ ಪ್ರಕ್ರಿಯೆಯನ್ನು ಪರಿಶೀಲಿಸಿದರು. ನಿಗಮದ ಹಣಕಾಸು ನಿರ್ದೇಶಕ ಆರ್.ನಾಗರಾಜ, ತಾಂತ್ರಿಕ ನಿರ್ದೇಶಕ ಎಂಆರ್. ಗಂಗಾಧರ್, ಆರ್‌ಟಿಪಿಎಸ್ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಆರ್.ರಮೇಶ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯುತ್ ಉತ್ಪಾದನೆ ಮತ್ತು ಕಲ್ಲಿದ್ದಲು ದಾಸ್ತಾನು ಪರಿಶೀಲನೆ
  • ಅಧಿಕಾರಿಗಳೊಂಗಿಗೆ ಸ್ಥಾವರಗಳ ನಿರ್ವಹಣೆಯ ಕುರಿತು ಸಭೆ
ರಾಯಚೂರು
ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಮಂಗಳವಾರ ಆರ್‌ಟಿಪಿಎಸ್ ಹಾಗೂ ವೈಟಿಪಿಎಸ್ ಉಷ್ಣ ವಿದ್ಯುತ್ ಉತ್ಪಾದನಾ ಸ್ಥಾವರಕ್ಕೆ ಭೇಟಿ ನೀಡಿ, ಸ್ಥಾವರದ ಸಮಗ್ರ ಕಾರ್ಯ ನಿರ್ವಹಣೆ ಹಾಗೂ ವಿದ್ಯುತ್ ಉತ್ಪಾದನಾ ಪ್ರಕ್ರಿಯೆಯನ್ನು ಪರಿಶೀಲಿಸಿದರು.

ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಆರ್‌ಟಿಪಿಎಸ್ ಹಾಗೂ ವೈಟಿಪಿಎಸ್ ಸ್ಥಾವರಗಳ ಪ್ರಸ್ತುತ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಮತ್ತು ಕಲ್ಲಿದ್ದಲು ಸಂಗ್ರಹದ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ರಾಜ್ಯದಲ್ಲಿ ಇನ್ನು ಮಳೆ ಕಡಿಮೆಯಾದರೆ ಭವಿಷ್ಯದಲ್ಲಿ ಜಲವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಳ್ಳಲಿದೆ.
ಈಗಾಗಲೇ ಮುಂಗಾರು ಅವಧಿಯಲ್ಲಿ ಹಾಗೂ ಬೇಡಿಕೆ ಹೆಚ್ಚಿರುವ ಸಮಯಗಳಲ್ಲಿ ಯಾವುದೇ ಅಡಚಣೆಯಿಲ್ಲದೆ ನಿರಂತರ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

ಆರ್‌ಟಿಪಿಎಸ್,ವೈಟಿಪಿಎಸ್ ಹಾಗೂ ಬಿಟಿಪಿಎಸ್ ಮೇಲೆಯೇ ರಾಜ್ಯ ನಿರ್ಭರ ಆಗಿರುವುದರಿಂದ ಥರ್ಮಲ್ ಘಟಕಗಳನ್ನು ಒತ್ತಡದ. ದಿನಗಳಲ್ಲೂ ತಾಂತ್ರಿಕ ಸಮಸ್ಯೆ ಬಾರದಂತೆ ಉತ್ಪಾದನೆಗೆ ತೊಡಗಿಸುವ ತಂತ್ರೋಪಾಯ ಅನುಸರಿಸುವುದರ ಬಗ್ಗೆ ಚರ್ಚೆ ನಡೆಸಿ ಸ್ಥಾವರದ ಯಂತ್ರೋಪಕರಣಗಳ ಸಮರ್ಪಕ ನಿರ್ವಹಣೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬಹುದಾದ ತಾಂತ್ರಿಕ ಸುಧಾರಣೆಗಳ ಬಗ್ಗೆ, ವಿದ್ಯುತ್ ಉತ್ಪಾದನೆಗೆ ಅಗತ್ಯವಿರುವ ಕಲ್ಲಿದ್ದಲಿನ ಸರಬರಾಜು ಮತ್ತು ದಾಸ್ತಾನು ಸಂಗ್ರಹದ ಕುರಿತು ಪರಿಶೀಲಿಸಿ, ಯಾವುದೇ ಕೊರತೆಯಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು.
ಸ್ಥಾವರದ ಉದ್ಯೋಗಿಗಳಲ್ಲಿ ಮತ್ತು ಅಧಿಕಾರಿಗಳಲ್ಲಿ ಆತ್ಮವಿಶ್ವಾಸ ತುಂಬುತ್ತಾ, ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಉತ್ಪಾದನಾ ಗುರಿಗಳನ್ನು ತಲುಪಲು ಕರೆ ನೀಡಿದರು.

ಈ ಸಂದರ್ಭದಲ್ಲಿ ನಿಗಮದ ಹಣಕಾಸು ನಿರ್ದೇಶಕ ಆರ್.ನಾಗರಾಜ, ತಾಂತ್ರಿಕ ನಿರ್ದೇಶಕ ಎಂಆರ್. ಗಂಗಾಧರ್, ಆರ್‌ಟಿಪಿಎಸ್ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಆರ್.ರಮೇಶ ಸೇರಿ ನಿಗಮದ ಇತರೆ ಹಿರಿಯ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net