ರಾಯಚೂರು ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ನಾರಾಯಣಪುರ ಜಲಾಶಯದಿಂದ 24 ಕ್ರಸ್ಟ್ ಗೇಟ್‌ಗಳ ಮೂಲಕ ಗುರುವಾರ 1.11 ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿದರು.
ನದಿಗೆ ನೀರು ಬಿಡಲಾಗಿದ್ದರಿಂದ ಕೃಷ್ಣಾ ನದಿಯು ಮೈದುಂಬಿ ಹರಿಯುತ್ತಿದ್ದು, ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲೂಕಿನ ನದಿಪಾತ್ರದ ಗ್ರಾಮಗಳಿಗೆ ಮುನ್ನೆಚ್ಚರಿಕೆ ನೀಡಿ ಜಿಲ್ಲಾಡಳಿತ ಹಾಗೂ ಕೆಬಿಜೆಎನ್‌ಎಲ್ ಅಧಿಕಾರಿಗಳಿಂದ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.