ಮಂತ್ರಾಲಯದ ಶ್ರೀ ರಾಘವೇಂದ್ರ ಮಠದಲ್ಲಿ ಗುರುವಾರ ರಾಯರ ದರ್ಶನಕ್ಕಾಗಿ ಲಕ್ಷಾಂತರ ಭಕ್ತರು ಆಗಮಿಸಿರುವುದು.
Published on:
Copied
Follow Us
ರಾಯಚೂರು ಹೊಸ ವರ್ಷದ ಆರಂಭ ಹಿನ್ನಲೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ರಾಯರಿಗೆ ಗುರುವಾರ ಬೆಳಗ್ಗೆ ವಿಶೇಷ ಪೂಜೆಗಳನ್ನು ನೆರವೇರಿಸಿದರು.
ಗುರು ರಾಯರ ವಾರ ಗುರುವಾರವೇ ವರ್ಷದ ಮೊದಲ ದಿನ ಬಂದ ಹಿನ್ನೆಲೆ ಪ್ರತಿ ವರ್ಷಕ್ಕಿಂತಲೂ ಎರಡು ಪಟ್ಟು ಭಕ್ತರಿಂದ ರಾಯರ ಮಠ ತುಂಬಿ ತುಳುಕುತ್ತಿದೆ.
ದೇಶದ ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಮಂತ್ರಾಲಯದ ರಾಯರ ಕ್ಷೇತ್ರದಲ್ಲಿ ವರ್ಷದ ಮೊದಲನೇ ದಿನ ರಾಘವೇಂದ್ರ ಸ್ವಾಮಿಗಳ ಅನುಗ್ರಹವಾದರೆ ಇಡೀ ವರ್ಷ ಒಳಿತಾಗುತ್ತದೆ ಎನ್ನುವ ನಂಬಿಕೆಯಿಂದ ಈ ಬಾರಿ ಲಕ್ಷಾಂತರ ಸಂಖ್ಯೆಯ ಭಕ್ತರು ಆಗಮಿಸಿ ದರ್ಶನ ಪಡೆದರು.
ಭಕ್ತರಿಗೆ ವಸತಿ ಮತ್ತು ಊಟದ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಸ್ವತಃ ಸಿದ್ಧತೆಗಳನ್ನು ಪರಿಶೀಲಿಸಿದರು.