ಕಾನೂನು ಅರಿವು ನೆರವು ಕಾರ್ಯಕ್ರಮ ಜೀತ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ: ನ್ಯಾಯಾಧೀಶ

ಕಡಗಂದೊಡ್ಡಿ ಗ್ರಾಮದ ಹತ್ತಿರದ  ಇಟ್ಟಿಗೆ ಭಟ್ಟಿಯಲ್ಲಿ ಜೀತ ಪದ್ಧತಿ ನಿರ್ಮೂಲನೆ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಉದ್ಘಾಟಿಸಿದರು. ಕಾರ್ಮಿಕ ಇಲಾಖೆಯ ಜಿಲ್ಲಾ ಅಧಿಕಾರಿ ಆರತಿ, ಕಾರ್ಮಿಕ ವೃತ್ತ ನಿರೀಕ್ಷಕ ಪ್ರಿಯಾಂಕ,ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ, ಇಟ್ಟಿಗೆ ಭಟ್ಟಿ ಮಾಲೀಕ ಈರಣ್ಣ  ಇದ್ದರು.
ಕಡಗಂದೊಡ್ಡಿ ಗ್ರಾಮದ ಹತ್ತಿರದ ಇಟ್ಟಿಗೆ ಭಟ್ಟಿಯಲ್ಲಿ ಜೀತ ಪದ್ಧತಿ ನಿರ್ಮೂಲನೆ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಉದ್ಘಾಟಿಸಿದರು. ಕಾರ್ಮಿಕ ಇಲಾಖೆಯ ಜಿಲ್ಲಾ ಅಧಿಕಾರಿ ಆರತಿ, ಕಾರ್ಮಿಕ ವೃತ್ತ ನಿರೀಕ್ಷಕ ಪ್ರಿಯಾಂಕ,ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ, ಇಟ್ಟಿಗೆ ಭಟ್ಟಿ ಮಾಲೀಕ ಈರಣ್ಣ ಇದ್ದರು.
Published on

ರಾಯಚೂರು

ಜೀತ ಪದ್ಧತಿಯು ದೊಡ್ಡದಾದ ಸಾಮಾಜಿಕ ಪಿಡುಗಾಗಿದ್ದು, ಇದರ ನಿರ್ಮೂಲನೆಗಾಗಿ ಎಲ್ಲರು ಕೈಜೋಡಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಹೇಳಿದರು.

ತಾಲೂಕಿನ ಕಡಗಂದೊಡ್ಡಿ ಗ್ರಾಮದ ಹತ್ತಿರದ ಇಟ್ಟಿಗೆ ಭಟ್ಟಿಯಲ್ಲಿ ಜೀತ ಪದ್ಧತಿ ನಿರ್ಮೂಲನೆ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಸಸಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಜೀತ ಪದ್ಧತಿಗೆ ಬಡತನವೇ ಮೂಲ ಕಾರಣವಾಗಿದೆ. ಕಾರ್ಮಿಕರಿಗಾಗಿಯೇ ಇರುವ ಕಾಯ್ದೆ ಕಾನೂನುಗಳನ್ನು ಅರಿಯುವುದು ಅತ್ಯಂತ ಮಹತ್ವವಾಗಿದ್ದು, ಕಾರ್ಮಿಕರಿಗಾಗಿಯೇ ಲಭ್ಯವಿರುವ ಉಚಿತ ಕಾನೂನು ಸಲಹೆ ಮತ್ತು ಸೇವೆಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬೇಕು. ತೊಂದರೆಯಾದಲ್ಲಿ ಸಹಾಯವಾಣಿ ಸಂಖ್ಯೆ 15100ಗೆ ಕರೆ ಮಾಡಿ ಕಾನೂನು ಸೇವೆಗಳನ್ನು ಪಡೆದುಕೊಳ್ಳಬಹುದು ಎಂದರು.

ಕಾರ್ಮಿಕ ಇಲಾಖೆಯ ಜಿಲ್ಲಾ ಅಧಿಕಾರಿ ಆರತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾರಾದರೂ ಎಲ್ಲಿಯಾದರೂ ಉದ್ಯೋಗ ಅವಕಾಶ ಪಡೆಯಲು ನಮಗೆ ಸಂವಿಧಾನಬದ್ಧ ಹಕ್ಕು ಇರುತ್ತದೆ. ಕೆಲಸ ಅರಸಿ ಬರುವ ಪ್ರತಿಯೊಬ್ಬರಿಗೂ ಉತ್ತಮ ಜೀವನ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಓಡಿಸ್ಸಾ, ಬಿಹಾರ, ಆಂಧ್ರ, ಮಹಾರಾಷ್ಟ ಮತ್ತು ಇತರೆ ಹೊರ ರಾಜ್ಯಗಳಿಂದ ವಲಸೆ ಕಾರ್ಮಿಕರು ವಲಸೆ ಬಂದು ಇಟ್ಟಿಗೆ ಭಟ್ಟಿಗಳಲ್ಲಿ, ಬೀದಿ ಬದಿಯಲ್ಲಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ಹತ್ತಿ ಮಿಲ್, ರೈಸ್ ಮಿಲ್ ಕೆಲಸದಲ್ಲಿ ತೊಡಗಿಸಿಕೊಂಡಿರುವುದು ಕಂಡುಬರುತ್ತಿದೆ. ಈ ಜನೆತೆಗೆ ಕಾನೂನಾತ್ಮಕ ಹಕ್ಕುಗಳು ಹಾಗೂ ಸೌಲಭ್ಯಗಳನ್ನು ಪಡೆಯುವಂತೆ ಸಲಹೆ ನೀಡಿ, ಮಾಲೀಕರಿಗೆ ಕಾರ್ಮಿಕರನ್ನು ಜೀತಪದ್ಧತಿಯಲ್ಲಿ ತೊಡಗಿಸಿಕೊಳ್ಳದಂತೆ ಹಾಗೂ ಮಕ್ಕಳನ್ನು ಬಾಲ ಹಾಗೂ ಕಿಶೋರ ಕಾರ್ಮಿಕರನ್ನಾಗಿಸದೇ ಹತ್ತಿರದ ಅಂಗನವಾಡಿ ಮತ್ತು ಶಾಲೆಗೆ ಸೇರಿಸಿ ಕಡ್ಡಾಯವಾಗಿ ಶಿಕ್ಷಣವನ್ನು ನೀಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ವೃತ್ತ ನಿರೀಕ್ಷಕ ಪ್ರಿಯಾಂಕ,ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ, ಇಟ್ಟಿಗೆ ಭಟ್ಟಿ ಮಾಲೀಕ ಈರಣ್ಣ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net