ಎಲ್ಲರೂ ದಂತ ಆರೋಗ್ಯ ಕಾಪಾಡಿಕೊಳ್ಳಲಿ

ಸಿಂಧನೂರಿನ ಏಳುರಾಗಿಕ್ಯಾಂಪ್ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಆರೋಗ್ಯ, ನೈರ್ಮಲ್ಯ ಹಾಗೂ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮವನ್ನು ದಂತ ವೈದ್ಯೆ ಅಪ್ರೋಜ್ ಭಾನು ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಲಕ್ಷ್ಮೀದೇವಿ, ಸಮುದಾಯ ಆರೋಗ್ಯ ಅಧಿಕಾರಿ ಅನುಸೂಯ, ಅಂಗನವಾಡಿ ಕಾರ್ಯಕರ್ತೆ ನಿರ್ಮಲಾ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ದಂತ ವೈದ್ಯೆ ಅಪ್ರೋಜ್ ಭಾನು ಸಲಹೆ
  • ಪೌಷ್ಟಿಕ ಆಹಾರ ದಿನ
ಸಿಂಧನೂರು: ಆರೋಗ್ಯಕರ ಜೀವನಶೈಲಿ, ವೈಯಕ್ತಿಕ ಸ್ವಚ್ಛತೆ, ಪರಿಸರ ನೈರ್ಮಲ್ಯ ಹಾಗೂ ಸಮತೋಲಿತ ಪೌಷ್ಟಿಕ ಆಹಾರದಿಂದ ಆರೋಗ್ಯ ವೃದ್ಧಿಸುತ್ತದೆ ಎಂದು ದಂತ ವೈದ್ಯೆ ಅಪ್ರೋಜ್ ಭಾನು ಹೇಳಿದರು.
ಏಳುರಾಗಿಕ್ಯಾಂಪ್ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಮ ಆರೋಗ್ಯ, ನೈರ್ಮಲ್ಯ ಹಾಗೂ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಎಲ್ಲ ವಯೋಮಾನದವರು ದಂತ ಆರೋಗ್ಯ ಕಾಪಾಡಿಕೊಳ್ಳಬೇಕು. ಗುಟ್ಕಾ, ತಂಬಾಕು ಸೇರಿ ತಂಬಾಕು ಉತ್ಪನ್ನಗಳನ್ನು ತ್ಯಜಿಸಬೇಕು ಎಂದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಮಾತನಾಡಿ, ಪೌಷ್ಟಿಕ ಆಹಾರದ ಅಗತ್ಯತೆ, ಅಪೌಷ್ಟಿಕತೆ ತಡೆಗಟ್ಟುವ ಕ್ರಮಗಳು ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಮಾಹಿತಿ ನೀಡಿದರು.
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಲಕ್ಷ್ಮೀದೇವಿ, ಸಮುದಾಯ ಆರೋಗ್ಯ ಅಧಿಕಾರಿ ಅನುಸೂಯ, ಅಂಗನವಾಡಿ ಕಾರ್ಯಕರ್ತೆಯರಾದ ನಿರ್ಮಲಾ, ಶಾಂತಮ್ಮ, ರಜಿಯಾ ಬೇಗಂ, ಆಶಾ ಕಾರ್ಯಕರ್ತೆ ಕಸ್ತೂರಿಬಾಯಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net