ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಯಲಿ

ಸಿಂಧನೂರಿನಲ್ಲಿ ಹಮ್ಮಿಕೊಂಡಿದ್ದ ಕಸಾಪ 112ನೇ ಸಂಸ್ಥಾಪನಾ ದಿನಾಚರಣೆಯನ್ನು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಬೀರಪ್ಪ ಶಂಭೋಜಿ ಉದ್ಘಾಟಿಸಿದರು. ಸನ್‌ರೈಸ್ ಕಾಲೇಜಿನ ಅಧ್ಯಕ್ಷ ಕೆ.ಇರ್ಫಾನ್, ಪರಿಷತ್‌ನ ಜಿಲ್ಲಾ ಮಹಿಳಾ ಪ್ರತಿನಿಧಿ ರಮಾದೇವಿ ಶಂಭೋಜಿ, ಕಸಾಪ ತಾಲೂಕು ಮಾಜಿ ಅಧ್ಯಕ್ಷ ವೆಂಕನಗೌಡ ವಟಗಲ್ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬೀರಪ್ಪ ಶಂಭೋಜಿ ಸಲಹೆ
ಸಿಂಧನೂರು: ಕನ್ನಡ ಪ್ರಾಮುಖ್ಯತೆಯನ್ನು ಕಸಾಪ ಮೂಲಕ ಜನರಿಗೆ ಮನವರಿಕೆ ಮಾಡಿಕೊಡಬೇಕೆಂದು ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬೀರಪ್ಪ ಶಂಭೋಜಿ ಹೇಳಿದರು.
ನಗರದಲ್ಲಿ ಕಸಾಪ ಜಿಲ್ಲಾ ಹಾಗೂ ತಾಲೂಕು ಘಟಕದಿಂದ ಮಂಗಳವಾರ ಹಮ್ಮಿಕೊಂಡಿದ್ದ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ, ಕನ್ನಡ ಪ್ರೌಢಶಾಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ನಡೆದು ಬಂದ ದಾರಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಯಬೇಕು. ದತ್ತಿಗಳ ಧನ ಸಹಾಯ ಹೆಚ್ಚಳವಾಗಿದ್ದು, ಸಮ್ಮೇಳನ ಕಡಿಮೆ ಆಗಿವೆ ಎಂದರು. 
ಸನ್‌ರೈಸ್ ಕಾಲೇಜಿನ ಅಧ್ಯಕ್ಷ ಕೆ.ಇರ್ಫಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಿತ್ಯ ಬಳಕೆಯಲ್ಲಿ ಕನ್ನಡ ಹೆಚ್ಚಾಗಿರಬೇಕು. ಶಬ್ಧ ಶುದ್ಧತೆ ಕಡೆ ಗಮನಹರಿಸಬೇಕು ಎಂದರು. ಕಸಾಪ ತಾಲೂಕು ಮಾಜಿ ಅಧ್ಯಕ್ಷ ವೆಂಕನಗೌಡ ವಟಗಲ್, ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಮಿರ್ಜಾ ಇಸ್ಮಾಯಿಲ್ ಅವರು ಸಮಾಜಕ್ಕೆ ನೀಡಿದ ಕೊಡುಗೆ, ಸರ್.ಎಂ.ವಿಶ್ವೇಶ್ವರಯ್ಯ ಅವರ ಸಾಧನೆಗಳ ಕುರಿತು ತಿಳಿಸಿದರು. 
ಜಿಲ್ಲಾ ಮಹಿಳಾ ಪ್ರತಿನಿಧಿ ರಮಾದೇವಿ ಶಂಭೋಜಿ, ಸಮಾಜ ಸೇವಕಿ ಲಕ್ಷ್ಮೀ ಪತ್ತಾರ್, ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕು ಅಧ್ಯಕ್ಷ ಎಚ್.ಎಫ್.ಮಸ್ಕಿ ಮಾತನಾಡಿದರು. ಉಪನ್ಯಾಸಕ ಎಚ್.ಎಂ.ಶ್ರೀಶೈಲ, ಚಂದ್ರೇಗೌಡ ಹರಟೆನೂರು, ಶಾಂತಾ ಒಳಗಿನ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net