ಹತ್ಯೆಗೈದವರಿಗೆ ಕಠಿಣ ಶಿಕ್ಷೆಯಾಗಲಿ

ಹುಬ್ಬಳ್ಳಿಯಲ್ಲಿನ ಮರ್ಯಾದೆಗೇಡು ಹತ್ಯೆ ಘಟನೆ ಖಂಡಿಸಿ ದೇವದುರ್ಗದಲ್ಲಿ ಗ್ರೇಡ್-2 ತಹಸೀಲ್ದಾರ್ ಗೋವಿಂದ ನಾಯಕಗೆ ವಿವಿಧ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು. ಹೋರಾಟಗಾರರಾದ ಸುನಂದಾ, ರಮಾ, ಶಾಂತಮ್ಮ, ಶಶಿಕಲಾ, ಜಹೀರಾ ಸುಲ್ತಾನ್, ಸಂತೋಷ್ ತ್ಯಾಪ್ಲಿ, ಪ್ರಜ್ವಲ್, ಮಹಾಲಿಂಗ ದೊಡ್ಡಮನಿ, ರಿಯಾಜ್ ಆರತಿ, ಬಾಬು, ಖಲಿಂ ಉದ್ದಾರ, ಅಮೀರ್ ಪಟೇಲ್, ನಬಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಗ್ರೇಡ್-2 ತಹಸೀಲ್ದಾರ್ ಗೋವಿಂದ ನಾಯಕಗೆ ಮನವಿ
  • ದೇವದುರ್ಗದಲ್ಲಿ ವಿವಿಧ ಸಂಘಟನೆಗಳಿಂದ ಒತ್ತಾಯ
ದೇವದುರ್ಗ: ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದಲ್ಲಿ ಗರ್ಭಿಣಿಯನ್ನು ಮರ್ಯಾದೆ ಹತ್ಯೆ ಮಾಡಿರುವ ಘಟನೆ ಖಂಡಿಸಿ ಪಟ್ಟಣದ ತಾಲೂಕು ಆಡಳಿತ ಸೌಧದ ಮುಂದೆ ಬುಧವಾರ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್, ಭಾರತ ವಿದ್ಯಾರ್ಥಿ ಫೆಡರೇಷನ್, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಹಾಗೂ ದಲಿತ ಹಕ್ಕುಗಳ ಸಮಿತಿಯಿಂದ ಪ್ರತಿಭಟನೆ ನಡೆಸಿ ಗ್ರೇಡ್-2 ತಹಸೀಲ್ದಾರ್ ಗೋವಿಂದ ನಾಯಕಗೆ ಮನವಿ ಸಲ್ಲಿಸಲಾಯಿತು.
12ನೇ ಶತಮಾನದಲ್ಲಿ ಬಸವಣ್ಣ ಅವರು ಜಾತಿ ವ್ಯವಸ್ಥೆ ಹೋಗಲಾಡಿಸಲು ಅಂತರ್ಜಾತಿ ವಿವಾಹ ಮಾಡಿಸಿ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದಿದ್ದರು. ಆದರೆ, ಶರಣರು ಗತಿಸಿ 800 ವರ್ಷಗಳು ಕಳೆದರೂ ಜಾತಿ ವ್ಯವಸ್ಥೆ ಹೋಗಿಲ್ಲ. ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿಯನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಖಂಡನೀಯ.
ಕಾನೂನಿನಲ್ಲಿ ಕಠಿಣ ಕ್ರಮ ಇಲ್ಲದಿರುವುದು ಇಂತಹ ಘಟನೆಗಳು ಮರುಕಳಿಸಲು ಕಾರಣವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮುಂದೆ ಇಂಥ ಘಟನೆಗಳು ನಡೆಯದಂತೆ ಸರ್ಕಾರ ಜಾಗೃತಿ ಮೂಡಿಸಬೇಕು. ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗೆ ನ್ಯಾಯಮೂರ್ತಿ ಜಿ.ಎಸ್.ವರ್ಮಾ ವರದಿಯ ಶಿಫಾರಸುಗಳನ್ನು ತ್ವರಿತ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net