ಯುವಕರು ಆರೋಗ್ಯಕ್ಕೆ ಆದ್ಯತೆ ನೀಡಲಿ

ದೇವದುರ್ಗ ತಾಲೂಕು ಸುಂಕೇಶ್ವರಹಾಳ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಶಿಬಿರದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಯಿತು.
ದೇವದುರ್ಗ ತಾಲೂಕು ಸುಂಕೇಶ್ವರಹಾಳ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಶಿಬಿರದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಆರೋಗ್ಯಕ್ಕೆ
  • ಆದ್ಯತೆ
  • ಮನವಿ
ದೇವದುರ್ಗ: ಯುವಕರು ದುಶ್ಚಟಗಳಿಗೆ ದಾಸರಾಗದೆ ಉತ್ತಮ ಆರೋಗ್ಯಕ್ಕೆ ಆದ್ಯತೆ ನೀಡಬೇಕು ಎಂದು ಕ್ಷಯರೋಗ ಮೇಲ್ವಿಚಾರಕ ರವಿಶಂಕರ ಶುಕ್ಲ ಹೇಳಿದರು.
ತಾಲೂಕಿನ ಸುಂಕೇಶ್ವರಹಾಳದ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಯುವಜನರ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿದರು. ಯಾವುದೇ ಸಣ್ಣಪುಟ್ಟ ಕಾಯಿಲೆ ಬಂದರೆ ನಿರ್ಲಕ್ಷ್ಯ ಮಾಡದೆ ಸೂಕ್ತ ಚಿಕಿತ್ಸೆ ಪಡೆಯಬೇಕು.
ಹೃದಯಾಘಾತ ಎಲ್ಲ ವಯಸ್ಸಿನವರಲ್ಲೂ ಕಾಣಿಸಿಕೊಳ್ಳುತ್ತವೆ. ಹೀಗಾಗಿ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು. ಕ್ಷಯ ಸಾಂಕ್ರಾಮಿಕ ರೋಗವಾಗಿದ್ದು, ಮೈಕೋ ಬ್ಯಾಕ್ಟಿರಿಯಂ ಟ್ಯೂಬರ್ ಕ್ಯೂಲೆ ಎಂಬ ಬ್ಯಾಕ್ಟಿರಿಯಾದಿಂದ ಹರಡುತ್ತದೆ. ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಸಂಜೆ ವೇಳೆ ಜ್ವರ, ಹಸಿವಾಗದಿರುವುದು, ತೂಕ ಕಡಿಮೆ, ಕಫದಲ್ಲಿ ರಕ್ತ ಬೀಳುವ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ಪಡೆಯಬೇಕು. ರೋಗಪತ್ತೆ, ಪರೀಕ್ಷೆ, ಚಿಕಿತ್ಸೆ ಸಂಪೂರ್ಣ ಉಚಿತವಾಗಿದೆ ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಗೀತಾಂಜಲಿ ಮಾತನಾಡಿ, ಬಾಲಕಿಯರಲ್ಲಿ ಕಾಣಿಸಿಕೊಳ್ಳುವ ರೋಗಗಳು, ಆರೋಗ್ಯ ಸಮಸ್ಯೆಗಳ ಬಗ್ಗೆ ಮುಚ್ಚಿಟ್ಟುಕೊಳ್ಳದೆ ಪಾಲಕರಿಗೆ ತಿಳಿಸಬೇಕು.
ವೈಯಕ್ತಿಕ ಸುಚಿತ್ವಕ್ಕೆ ಆದ್ಯತೆ ನೀಡಬೇಕು. ಇಂದಿನ ಕಲುಷಿತ ವಾತಾವಣದಲ್ಲಿ ಆರೋಗ್ಯವೇ ಸಂಪತ್ತು. ಅದನ್ನು ಕಾಪಾಡಿಕೊಳ್ಳಲು ಯುವಜನತೆ ಮುಂದಾಗಬೇಕು ಎಂದರು.
ಪ್ರಾಚಾರ್ಯ ವೀರೇಶ, ಆರೋಗ್ಯ ಶಿಕ್ಷಣಾಧಿಕಾರಿ ಗೀತಮ್ಮ, ಪ್ರವೀಣಕುಮಾರ ಹಿರೇಮಠ, ಕಾಲೇಜು ಆಡಳಿತಾಧಿಕಾರಿ ವೆಂಕಟೇಶ ನಿಲೋಗಲ್, ಉಪನ್ಯಾಸಕರಾದ ರಾಮಲಿಂಗ, ನರಸಪ್ಪ, ಪ್ರಭು ಹೊಸಮನಿ, ಬಾಳಮ್ಮ, ಸಿದ್ದಾರೂಢ, ಚಂದನ್, ಬಸವರಾಜ, ಶಾಂತಾ, ಮರಿಲಿಂಗಮ್ಮ, ಆರೋಗ್ಯ ಇಲಾಖೆ ಸಿಬ್ಬಂದಿ ಭೀಮೇಶಪ್ಪ, ರಾಮಕೃಷ್ಣ, ಅಭಿಜಿತ್, ರೇಣುಕಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net