ಕಾರ್ಮಿಕ ಸಂಘಟನೆಗಳ ಸಭೆ ಕರೆದು ಚರ್ಚಿಸಲಿ

ಸಿಂಧನೂರಿನಲ್ಲಿ ಎಐಸಿಸಿಟಿಯು ಮುಖಂಡರು ಗುರುವಾರ ಪ್ರತಿಭಟನೆ ನಡೆಸಿದರು. ಸಂಘಟನೆಯ ರಾಜ್ಯ ಸಹ ಕಾರ್ಯದಶಿ ನಾಗರಾಜ್ ಪೂಜಾರ್, ನಿಂಗಪ್ಪ ತುರ್ವಿಹಾಳ, ವೀರೇಶ ಜವಗೇರಾ, ಮೌನೇಶ್ ಕವಿತಾಳ, ವೆಂಕಟೇಶ ಇತರರಿದ್ದರು.
ಸಿಂಧನೂರಿನಲ್ಲಿ ಎಐಸಿಸಿಟಿಯು ಮುಖಂಡರು ಗುರುವಾರ ಪ್ರತಿಭಟನೆ ನಡೆಸಿದರು. ಸಂಘಟನೆಯ ರಾಜ್ಯ ಸಹ ಕಾರ್ಯದಶಿ ನಾಗರಾಜ್ ಪೂಜಾರ್, ನಿಂಗಪ್ಪ ತುರ್ವಿಹಾಳ, ವೀರೇಶ ಜವಗೇರಾ, ಮೌನೇಶ್ ಕವಿತಾಳ, ವೆಂಕಟೇಶ ಇತರರಿದ್ದರು.
Published on
ಸಿಂಧನೂರು: ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೊಳಿಸಿದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು)ನಿಂದ ನಗರದ ಗಾಂಧಿ ವೃತ್ತದಲ್ಲಿ ಗುರುವಾರ ಅಧಿಸೂಚನೆಯ ಪ್ರತಿ ದಹಿಸಿ ಪ್ರತಿಭಟನೆ ನಡೆಸಲಾಯಿತು. 
ಕೇಂದ್ರ ಸರ್ಕಾರ 2025ರ ನ.21ರಂದು ಯಾವುದೇ ಪೂರ್ವ ಸೂಚನೆ, ಸಾರ್ವಜನಿಕ ಚರ್ಚೆ ಅಥವಾ ಕಾರ್ಮಿಕ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸದೆ ವೇತನ ಸಂಹಿತೆ 2019, ಸಾಮಾಜಿಕ ಭದ್ರತಾ ಸಂಹಿತೆ 2020, ಕೈಗಾರಿಕಾ ಸಂಬಂಧಗಳ ಸಂಹಿತೆ 2020, ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ 2020 ಅನ್ನು ಜಾರಿಗೊಳಿಸಿದೆ. 2026ರ ಮೇ 8ರಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ನಾಲ್ಕು ಕಾರ್ಮಿಕ ಸಂಹಿತೆಗಳಡಿ ಅಧಿಕೃತವಾಗಿ ಅಧಿಸೂಚನೆ ಹೊರಡಿಸುವ ಮೂಲಕ ಕಾರ್ಮಿಕರ ಮೇಲೆ ಗದಾಪ್ರಹಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರವು ಕಾರ್ಮಿಕ ಸಂಹಿತೆಗಳ ಅಧಿಸೂಚನೆಯನ್ನು ವಾಪಸ್ ಪಡೆಯಬೇಕು. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಜಾರಿಗೊಳಿಸಬಾರದು. ಕಾರ್ಮಿಕ ಸಂಹಿತೆಗಳು ಹಾಗೂ ಅಧಿಸೂಚ ರದ್ದುಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಮಿಕ ಸಂಘಟನೆಗಳ ಸಭೆ ಕರೆದು ಚರ್ಚಿಸಬೇಕು ಎಂಬ ಆಗ್ರಹಿಸಿದರು. 
ಸಂಘಟನೆಯ ರಾಜ್ಯ ಸಹ ಕಾರ್ಯದಶಿ ನಾಗರಾಜ್ ಪೂಜಾರ್, ನಿಂಗಪ್ಪ ತುರ್ವಿಹಾಳ, ವೀರೇಶ ಜವಗೇರಾ, ಮೌನೇಶ್ ಕವಿತಾಳ, ವೆಂಕಟೇಶ, ಹನುಮಂತ, ವೀರೇಶ , ಹುಸೇನಪ್ಪ, ಅಲ್ಲಾಸಾಬ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net