ಸಿಂಧನೂರಿನ ನಟರಾಜ ಕಾಲನಿಯಲ್ಲಿ ಮಂಗಳವಾರ ಆರೋಗ್ಯ ಇಲಾಖೆಯಿಂದ ಮಲೇರಿಯಾ ಮಾಸಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಯಿತು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ, ಹನುಮಂತ, ಶಮೀನಾಬೇಗಂ, ಶಿವರಾಜ, ಸತೀಶ ಇದ್ದರು.
ಸಿಂಧನೂರು: ಮಲೇರಿಯಾ ರೋಗ ತೊಲಗಿಸಲು ಎಲ್ಲರೂ ಪಣ ತೊಡಬೇಕು. ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತೆ ಕಾಪಾಡಬೇಕು ಎಂದು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ ಹೇಳಿದರು.
ನಗರದ ನಟರಾಜ ಕಾಲನಿಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ರಾಜೇಂದ್ರ ಮೆಮೋರಿಯಲ್ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಯಿಂದ ಹಮ್ಮಿಕೊಂಡಿದ್ದ ಮಲೇರಿಯಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಳೆಗಾಲ ಆರಂಭವಾಗಿರುವುದರಿಂದ ಸಾಂಕ್ರಾಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮನೆ ಸುತ್ತಲಿನಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳ ಉತ್ಪತ್ತಿ ತಡೆಯಬೇಕು ಎಂದರು.
ಆರೋಗ್ಯ ಇಲಾಖೆಯ ಹನುಮಂತ, ಶಮೀನಾಬೇಗಂ, ಮುಖ್ಯಶಿಕ್ಷಕ ಶಿವರಾಜ, ಸತೀಶ, ಲಕ್ಷ್ಮೀ, ಹುಲಿಗೆಮ್ಮ, ಬಾನುಬೇಗಂ, ಸೈನಜ್, ಮೇರುನ್ನಿಸಾ, ವಿಜಯಲಕ್ಷ್ಮೀ ಇದ್ದರು.