ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆಗೆ ಸಿದ್ಧತೆಯಾಗಲಿ

ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಬುಧವಾರ ತಹಶೀಲ್ದಾರ್ ಜಗದೀಶ್ ಅಧ್ಯಕ್ಷತೆಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಸಮಾಜದ ಪ್ರಮುಖರಾದ ಶಿವರಾಜ, ಹೊನ್ನಪ್ಪ, ಆಂಜೀನಯ್ಯ, ಶಶಿಕಲಾ ಭೀಮರಾಯ, ಯಲ್ಲಪ್ಪ, ದೇವೇಂದ್ರ ಬಿಚ್ಚಾಲಿ, ಲಕ್ಷಣ ಗಾಣಧಾಳ, ಶಿವರಾಜ, ಕೆ.ತಿಮ್ಮಪ್ಪ, ಜಂಬಣ್ಣ, ಈರೇಶ ಇದ್ದರು.

Published on
ರಾಯಚೂರು ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶಿವಯೋಗಿ ಸಿದ್ಧರಾಮ ಜಯಂತಿಯನ್ನು ಜ.14ರಂದು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಜಗದೀಶ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ಧರಾಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜನವರಿ 14ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ನಡೆಯುವ ಶಿವಯೋಗಿ ಸಿದ್ಧರಾಮ ಜಯಂತಿಯ ವೇದಿಕೆಯ ಕಾರ್ಯಕ್ರಮಕ್ಕೆ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಅಂದು ಬೆಳಗ್ಗೆ 9 ಗಂಟೆಗೆ ನಗರದ ಆಶಾಪೂರು ವೃತ್ತದಿಂದ ನಡೆಯುವ ಮೆರವಣಿಗೆಯ ಮಾರ್ಗದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು. ನಗರದ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಮಾಡಬೇಕು. ಎಲ್ಲ ಸರಕಾರಿ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು ಎಂದು ಸೂಚನೆ ನೀಡಿದರು.
ವೇದಿಕೆಯ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕ್ಕೆ ಏರ್ಪಾಡು ಮಾಡಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಜತೆಗೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕು. ಅಲ್ಲದೆ ಶಿಷ್ಠಾಚಾರಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ ವಿತರಿಸಬೇಕು. ಅಂದು ರಂಗಮಂದಿರದ ಆವರಣದಲ್ಲಿ ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಏರ್ಪಾಡು ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಸಮಾಜದ ಪ್ರಮುಖರಾದ ಶಿವರಾಜ, ಹೊನ್ನಪ್ಪ, ಆಂಜೀನಯ್ಯ, ಶಶಿಕಲಾ ಭೀಮರಾಯ, ಯಲ್ಲಪ್ಪ, ದೇವೇಂದ್ರ ಬಿಚ್ಚಾಲಿ, ಲಕ್ಷಣ ಗಾಣಧಾಳ, ಶಿವರಾಜ, ಕೆ.ತಿಮ್ಮಪ್ಪ, ಜಂಬಣ್ಣ, ಈರೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net