ಏ.20ರತನಕ ನೀರು ಹರಿಸಲು ಡಿಸಿಎಂಗೆ ಪತ್ರ

ಡಿ.ಎಸ್.ಹೂಲಗೇರಿ
ಡಿ.ಎಸ್.ಹೂಲಗೇರಿ
Published on
ಲಿಂಗಸುಗೂರು: ನಾರಾಯಣಪುರ ಬಲದಂಡೆ ನಾಲೆ, ರಾಂಪುರ ಏತ ನೀರಾವರಿ ನಾಲೆಗಳಿಗೆ ಏ.20ರವರೆಗೆ ನೀರು ಹರಿಸಬೇಕೆಂದು ಜಲಸಂಪನ್ಮೂಲ ಸಚಿವ, ಡಿಸಿಎಂ ಡಿ.ಕೆ ಶಿವಕುಮಾರ ಹಾಗೂ ಅಬಕಾರಿ ಸಚಿವ, ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ ತಿಮ್ಮಾಪುರ ಅವರಿಗೆ ಮಾಜಿ ಶಾಸಕ ಡಿ.ಎಸ್. ಹೂಲಗೇರಿ ಶುಕ್ರವಾರ ಪತ್ರ ಬರೆದಿದ್ದಾರೆ.
ನಾರಾಯಣಪುರ ಬಲದಂಡೆ ನಾಲೆ ಹಾಗೂ ರಾಂಪುರ ಏತ ನೀರಾವರಿ ಅಚ್ಚುಕಟ್ಟು ಪ್ರದೇಶಕ್ಕೆ ಒಳಪಡುವ ಕೃಷಿ ಭೂಮಿಯಲ್ಲಿ ರೈತರು ಹಿಂಗಾರು ಬೆಳೆ ಬಿತ್ತನೆ ಮಾಡಿದ್ದಾರೆ. 
ಬೆಳೆ ರೈತರ ಕೈ ಸೇರಬೇಕಾದರೆ ವಾರಬಂದಿಯಂತೆ ಏ.20ರತನಕ ಕಾಲುವೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ಬೆಳೆಗಳು ಒಣಗಿ ರೈತರಿಗೆ ನಷ್ಟವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 
ಹೂಲಗೇರಿ ಪತ್ರಕ್ಕೆ ಸ್ಪಂದಿಸಿದ ಡಿಸಿಎಂ ಡಿ.ಕೆ.ಶಿವಕುಮಾರ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಬಿ.ಎಸ್.ಶ್ರೀಧರ ಅವರು ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಟಿಪ್ಪಣೆ ಬರೆದಿದ್ದಾರೆ.  
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net