ಆ.28 ರಂದು ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಪ್ರಶಸ್ತಿ ಪ್ರದಾನ

ಸಮಿತಿ ಕಾರ್ಯದರ್ಶಿ ಬಸವರಾಜ ಸಿಂಧನೂರು ಹೇಳಿದರು.
ಸಮಿತಿ ಕಾರ್ಯದರ್ಶಿ ಬಸವರಾಜ ಸಿಂಧನೂರು ಹೇಳಿದರು.
Published on

ಮಹಾಶೈವ ಧರ್ಮಪೀಠದ ವತಿಯಿಂದ ನೀಡಲಾಗುವ ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜಿಲ್ಲೆಯ ಗಬ್ಬೂರು ಗ್ರಾಮದಲ್ಲಿ ಆ.28 ರಂದು ಹಮ್ಮಿಕೊಳ್ಳಲಾಗಿದೆಂದು ಸಮಿತಿ ಕಾರ್ಯದರ್ಶಿ ಬಸವರಾಜ ಸಿಂಧನೂರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾಶೈವ ಧರ್ಮಪೀಠದ ಪೀಠಾಧ್ಯಕ್ಷ ಮುಕ್ಕಣ್ಣ ಕರಿಗಾರ ಅವರ ಆಧ್ಯಾತ್ಮಿಕ ಗುರುಗಳಾದ ಧಾರವಾಡ ತಪೋವನದ ಮಹಾತಪಸ್ವಿ ಶ್ರೀ ಕುಮಾರ ಸ್ವಾಮಿಗಳವರ ಹೆಸರಿನಲ್ಲಿ ಪ್ರತಿ ವರ್ಷ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಪಶುಗಳನ್ನು ಪ್ರದಾನ ಮಾಡುತ್ತಿದ್ದು,
ಈ ಬಾರಿ ಸಾಹಿತ್ಯರತ್ನ ಪ್ರಶಸ್ತಿಯನ್ನು ಬೆಂಗಳೂರಿನ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ, ಪತ್ರಿಕಾಭೂಷಣ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ರಘುನಾಥರೆಡ್ಡಿ ಮನ್ಸಲಪುರ, ಸೇವಾಭೂಷಣ ಪ್ರಶಸ್ತಿಯನ್ನು ಖಾಸೀಮ್ ಮಲ್ಲಿಗೆ ಮಡುವು ಅವರಿಗೆ ನೀಡಲಾಗಿದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಎನ್.ಎಚ್.ಪುಜಾರಿ,ಎಚ್.ಎಸ್ ಮೇಟಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net