ಮನೆ ಸುತ್ತಲಿನಲ್ಲಿ ಸ್ವಚ್ಛತೆ ಕಾಪಾಡಿ

ಜವಳಗೇರಾದಲ್ಲಿ ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಕುರಿತು ಜನ ಜಾಗೃತಿ ಜಾಥಾ ನಡೆಸಲಾಯಿತು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ, ಆರೋಗ್ಯ ನಿರೀಕ್ಷಣಾ ಅಧಿಕಾರಿ ಮಹೇಶ, ಪ್ರಮುಖರಾದ ಉದಯಕುಮಾರ, ರಾಧಾ ಇತರರಿದ್ದರು.
ಜವಳಗೇರಾದಲ್ಲಿ ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಕುರಿತು ಜನ ಜಾಗೃತಿ ಜಾಥಾ ನಡೆಸಲಾಯಿತು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ, ಆರೋಗ್ಯ ನಿರೀಕ್ಷಣಾ ಅಧಿಕಾರಿ ಮಹೇಶ, ಪ್ರಮುಖರಾದ ಉದಯಕುಮಾರ, ರಾಧಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಕುರಿತು ಜಾಗೃತಿ
  • ಜನ ಜಾಗೃತಿ ಜಾಥಾ
ಸಿಂಧನೂರು: ಮನೆಯ ಸುತ್ತಲೂ ನಿಂತ ನೀರಿನ ತಾಣಗಳಲ್ಲಿ ಲಾರ್ವಾಗಳು ಉತ್ಪತ್ತಿಯಾಗದಂತೆ ಸ್ವಚ್ಛತೆ ಕಾಪಾಡಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಹೇಳಿದರು.
ಜವಳಗೇರಾ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಶ್ರೀ ರೇಣುಕಾ ಕಾಲೇಜ್ ಆಫ್ ನರ್ಸಿಂಗ್ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಕುರಿತು ಜನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಂಗಾರು ಆರಂಭವಾಗಿದ್ದು, ನೀರಿನ ಸಂಗ್ರಹ ಹೆಚ್ಚಾಗಿ ಸೊಳ್ಳೆಗಳು ಉತ್ಪತ್ತಿ ಆಗುತ್ತವೆ. ಇದರಿಂದ ಡೆಂಘೆ, ಮಲೇರಿಯಾ, ಚಿಕೂನ್ ಗುನ್ಯಾ, ಆನೆಕಾಲು ರೋಗ, ಮಿದುಳು ಜ್ವರ ಹರಡುವ ಸಾಧ್ಯತೆ ಇದ್ದು, ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಪ್ರೀತಾ, ಆರೋಗ್ಯ ನಿರೀಕ್ಷಣಾ ಅಧಿಕಾರಿ ಮಹೇಶ, ಪ್ರಮುಖರಾದ ಉದಯಕುಮಾರ, ರಾಧಾ, ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net