ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ತುರ್ತು ಚಿಕಿತ್ಸಾ ವಾಹನಕ್ಕೆ ಶಾಸಕ ಹಂಪಯ್ಯನಾಯಕ ಚಾಲನೆ ನೀಡಿದರು. ತಾಲೂಕು ಅರೋಗ್ಯಾಧಿಕಾರಿ ಡಾ. ಶರಣಬಸವರಾಜ, ಡಾ. ಗುರುಶರ್ಮ, ಫಾರ್ಮಸಿಸ್ಟ್ ಎಸ್. ಬಸವರಾಜ, ಮುಖಂಡರಾದ ಪಂಪನಗೌಡ, ಶರಣಪ್ಪ ರಂಗದಾಳ, ಹಸನ್ ಬಾಷಾ ಇತರರಿದ್ದರು.
ಮಾನ್ವಿ: ಪೋತ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತುರ್ತು ಚಿಕಿತ್ಸಾ ವಾಹನ ಸೇವೆಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಶಾಸಕ ಹಂಪಯ್ಯನಾಯಕ ಹೇಳಿದರು.
ತಾಲೂಕಿನ ಪೋತ್ನಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಗುರುವಾರ ತುರ್ತು ಚಿಕಿತ್ಸಾ ವಾಹನ ಸೇವೆಗೆ ಹಸಿರು ನಿಶಾನೆ ತೊರುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಈ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಪೋತ್ನಾಳ್ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು ಶೀಘ್ರದಲ್ಲಿಯೇ ರಾಜ್ಯದ ಆರೋಗ್ಯ ಸಚಿವ ದಿನೇಶ ಗುಂಡುರಾವ್ ಅವರಿಂದ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.
ಪೋತ್ನಾಳ್ ವ್ಯಾಪ್ತಿಯಲ್ಲಿನ 40 ಗ್ರಾಮಗಳ ಜನರಿಗೆ ತುರ್ತು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಾಗ ಪೋತ್ನಾಳ ಆರೋಗ್ಯ ಕೇಂದ್ರಕ್ಕೆ ರೋಗಿಗಳನ್ನು ಕರೆತಂದು ಜೀವ ಉಳಿಸಿಕೊಳ್ಳುವುದಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಆಂಬುಲೆನ್ಸ್ ಮಂಜೂರು ಮಾಡಿಸಲಾಗಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಮುಖಂಡರಾದ ಚನ್ನಪ್ಪ ಛಲವಾದಿ, ಶರೀಫ್, ಮಂಜುನಾಥ್ ನಾಯಕ್, ಖಾನ್‌ಸಾಬ್, ಶಿವ ಗ್ಯಾನಪ್ಪ ಗುಜ್ಜಲ್, ಉಪ್ಪಳಪ್ಪ ದೇವರುಮನೆ, ಆರೋಗ್ಯ ಕೇಂದ್ರದ ಸಿಬ್ಬಂದಿ ಇದ್ದರು.