ಮುದಗಲ್: ಪಟ್ಟಣದ ನೀಲಕಂಠೇಶ್ವರ ದೇವಸ್ಥಾನದ ಎಡಭಾಗದಲ್ಲಿ ಎಸ್ಸಿಪಿ-ಟಿಎಸ್ಪಿ ಅನುದಾನದಡಿ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಾರ್ವಜನಿಕ ಅಲೆಮಾರಿ ಗ್ರಂಥಾಲಯ ಕಟ್ಟಡವನ್ನು ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಮಂಗಳವಾರ ಸರಸ್ವತಿ ಪೂಜೆ ಸಲ್ಲಿಸುವ ಮೂಲಕ ಉದ್ಘಾಟನೆ ಮಾಡಿದರು.
ಗ್ರಂಥಾಲಯದಲ್ಲಿ ದೈನಂದಿನ ಪತ್ರಿಕೆ, ಕಥೆ, ಕಾದಂಬರಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರಕವಾದ ಪುಸ್ತಕಗಳು ಇದ್ದು, ಯುವಕರು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.