ಕಾಂಗ್ರೆಸ್ ಸರ್ಕಾರದ ವಿರುದ್ಧ ಪಾದಯಾತ್ರೆ

ಸಿಂಧನೂರು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ  ಜಿಪಂ ಮಾಜಿ ಸದಸ್ಯ ಕೆ.ಕರಿಯಪ್ಪ ಮಾತನಾಡಿದರು. ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪಿ.ರಾಜೀವ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಸಿದ್ದರಾಮೇಶ ಮನ್ನಾಪುರ, ಗ್ರಾಮೀಣ ಮಂಡಲ ಅಧ್ಯಕ್ಷ ವೆಂಕೋಬ ರಾಮತ್ನಾಳ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಬಿಜೆಪಿ
  • ರಾಜ್ಯ
  • ಕಾರ್ಯದರ್ಶಿ

ಸಿಂಧನೂರು: ಸೆ.1ರಂದು ರಾಜ್ಯ ಸರ್ಕಾರದ ವಿರುದ್ಧ ಆಯೋಜಿಸಿರುವ ಪಾದಯಾತ್ರೆಯಲ್ಲಿ ಸಹ್ರಸ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಜನರು ಭಾಗವಹಿಸಬೇಕು ಎಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪಿ.ರಾಜೀವ್ ಮನವಿ ಮಾಡಿದರು.

ಬಿಜೆಪಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಂದು ಪಾದಯಾತ್ರೆ ರಾತ್ರಿ ಸಂತೆಕೆಲ್ಲೂರಿನಲ್ಲಿ ವಾಸ್ತವ್ಯ ಹೂಡಲಿದೆ. ಸೆ.2ರಂದು ಬೆಳಗ್ಗೆ 9ಗಂಟೆಗೆ ಸಂತೆಕೆಲ್ಲೂರಿನಿಂದ ಮಸ್ಕಿಯ ಹಳೆಯ ಬಸ್ ನಿಲ್ದಾಣ ತಲುಪಲಿದ್ದು ಗುಡದೂರಿನಲ್ಲಿ ವಾಸ್ತವ್ಯ ಹೂಡಲಿದೆ.
ಸೆ.3ರಂದು ಮುದ್ದಾಪುರದಿಂದ ಸಿಂಧನೂರು ವಿಧಾನಸಭೆ ಕ್ಷೇತ್ರಕ್ಕೆ ಪಾದಯಾತ್ರೆ ಸ್ವಾಗತ ಮಾಡಿಕೊಳ್ಳಲಿದ್ದು ಕುನ್ನಟಗಿ, ಪಗಡದಿನ್ನಿ ಮೂಲಕ ಸಿಂಧನೂರು ಪಿಡಬ್ಲ್ಯುಡಿಕ್ಯಾಂಪ್ ತಲುಪಲಿದ್ದು ಸಂಜೆ ನಗರದ ಗಾಂಧಿ ಸರ್ಕಲ್‌ನಲ್ಲಿ ಬಹಿರಂಗ ಸಭೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಸೇರಿ ರಾಜ್ಯ, ಜಿಲ್ಲಾ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
ಜಿಪಂ ಮಾಜಿ ಸದಸ್ಯ ಕೆ.ಕರಿಯಪ್ಪ ಮಾತನಾಡಿ, ಪಾದಯಾತ್ರೆಯಲ್ಲಿ ಪ್ರತಿ ಬೂತ್‌ನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು. ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ 8 ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು ಕಾರ್ಯಕರ್ತರು ಪಾಲ್ಗೊಂಡು ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದರು.
ಪ್ರಮುಖರಾದ ನಬಿ ಅನಗವಾಡಿ, ಸಿರಾಜ್‌ಪಾಷಾ, ಟಿ.ಸುಬ್ಬಾರಾವ್, ಲಿಂಗರಾಜ ಹೂಗಾರ, ರೇಣುಕಮ್ಮ, ಶಿವಮ್ಮ, ಮಹಾನಂದೆಮ್ಮ, ಯಮನಮ್ಮ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net