ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶಭಕ್ತಿ ಹಾಗೂ ಧರ್ಮ ಜಾಗೃತಿಯ ಉದ್ದೇಶದೊಂದಿಗೆ ಆಯೋಜಿಸಲಾಗಿರುವ ಈ ಸಮಾವೇಶದಲ್ಲಿ ರಾಷ್ಟ್ರದ ಅಸ್ಮಿತೆ ಮತ್ತು ಸನಾತನ ಧರ್ಮದ ರಕ್ಷಣೆಗಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಮುಖ ಮುಖಂಡರು ಹಾಗೂ ಧಾರ್ಮಿಕ ಚಿಂತಕರು ಪಾಲ್ಗೊಳ್ಳಲಿದ್ದಾರೆ. ನಮ್ಮ ಸಂಸ್ಕೃತಿ, ರಾಷ್ಟ್ರೀಯತೆ ಮತ್ತು ಧರ್ಮದ ಉಳಿವಿಗಾಗಿ ಹಮ್ಮಿಕೊಳ್ಳಲಾಗಿದೆಂದು ತಿಳಿಸಿದರು.