ಮಾ.20 ರಂದು ಹಟ್ಟಿಯಲ್ಲಿ ಸಭೆ

narayana swamy
narayana swamy
Published on
ರಾಯಚೂರು ಒಳಮೀಸಲಾತಿ ರೋಸ್ಟರ್ ಹಂಚಿಕೆ ವಿರೋಧಿಸಿ, ಹಳೆಯ ಮೀಸಲಾತಿ ನಿಯಮದಂತೆ ತ್ವರಿತ ನೇಮಕಾತಿ ನಡೆಸಲು ಒತ್ತಾಯಿಸಿ ಮಾ.20 ರಂದು ಭೋವಿ ಸಮಾಜದಿಂದ ಹಟ್ಟಿ ಪಟ್ಟಣದ ಅತಿಥಿ ಗೃಹದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆಂದು ಸಾಮಾಜದ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಬೆಂಗಳೂರಿನಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಹಳೆಯ ಮೀಸಲಾತಿ ನಿಯಮ ಶೇ.50ರನ್ವಯ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶ ಪ್ರಕ್ರಿಯೆಯನ್ನು ಮುಂದುವರೆಸುವುದಾಗಿ ರಾಜ್ಯ ಸರ್ಕಾರ ಪ್ರಕಟಣೆ ಮಾಡಿದ್ದು, ಸ್ವಾಗತಾರ್ಹ. ಕೂಡಲೇ ಸರ್ಕಾರ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಬೇಕು ಎಂಬ ವಿಷಯದ ಕುರಿತು ಚರ್ಚೆ ನಡೆಯಲಿದೆ ಎಂದರು.
ಈ ಹಿಂದೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗೆ ಶೇ.17, ಪರಿಶಿಷ್ಟ ಪಂಗಡಕ್ಕೆ ಶೇ.7 ಮೀಸಲಾತಿಯನ್ನು ಹೆಚ್ಚಳ ಮಾಡಿರುವ ಆದೇಶವನ್ನು ಸಂವಿಧಾನದ 9ನೇ ಷೆಡ್ಯೂಲ್ನಲ್ಲಿ ಸೇರಿದಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಪ್ರಧಾನಿಗಲ ಬಳಿ ನಿಯೋಗ ಹೋಗಬೇಕು. ಕೇಂದ್ರದ ಮೇಲೆ ಒತ್ತಡ ಹೇರಬೇಕು. ದೇಶವ್ಯಾಪಿ ನಡೆಯುತ್ತಿರುವ ಜನಗಣತಿ ದತ್ತಾಂಶ ಬರುವವರೆಗೆ ಏಕಪಕ್ಷೀ ಯವಾಗಿ ನಿರ್ಧಾರ ಮಾಡಬಾರದು. ರಾಜ್ಯದಲ್ಲಿ ಒಳ ಮೀಸಲಾತಿ ಹಂಚಿಕೆ ನಡೆಸುವ ಮುನ್ನ ನಮ್ಮ ಸಮುದಾಯಗಳ ಮುಖಂಡರ ಜೊತೆಗೆ ಸಮಾಲೋಚನೆ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಈರಣ್ಣ, ಲಕ್ಷ್ಮಣ, ನರಸಿಂಹಲು , ತಾಯಪ್ಪ, ಶಿವರಾಜ, ಸತ್ಯರೆಡ್ಡಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net