ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಸಭೆ

ತಾಲೂಕಿನ ಶಕ್ತಿನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಮಹತ್ವಾಕಾಂಕ್ಷಿ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಅಭಿವೃದ್ಧಿ ಕುರಿತು ಪರಿಶೀಲನಾ ಸಭೆ ನಡೆಸಿದರು. ಹಣಕಾಸು ಸಚಿವಾಲಯದ ಕಾರ್ಯದರ್ಶಿ ಸಂಜಯ್ ಲೋಹಿಯಾ, ಆಪ್ತ ಕಾರ್ಯದರ್ಶಿ ಅನಿರುದ್ಧ ಶ್ರವಣ್, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಶಾಜಿ ಕೃಷ್ಣನ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್. ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಪಂ ಸಿಇಓ ಈಶ್ವರ ಕುಮಾರ ಕಾಂದೂ,ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹೋಪಾತ್ರ, ಎಸ್ಪಿ ಅರುಣಾಂಗ್ಷು ಗಿರಿ, ಯಾದಗಿರಿ ಡಿಸಿ ರಾಹುಲ್ ತುಕಾರಾಂ ಪಾಂಡ್ವೆ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಮಹತ್ವಾಕಾಂಕ್ಷಿ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಅಭಿವೃದ್ಧಿ ಕುರಿತು ಪರಿಶೀಲನಾ ಸಭೆ
  • -ಮಹತ್ವಾಕಾಂಕ್ಷಿ ಜಿಲ್ಲೆಗಳ ಅಭಿವೃದ್ದಿಗೆ ಕೇಂದ್ರ ಬದ್ಧ
  • ಮಹಿಳೆಯರಿಗೆ ಮತ್ತು ಯುವಕರಿಗೆ ಸ್ವಯಂ ಉದ್ಯೋಗಾವಕಾಶಗಳನ್ನು ಒದಗಿಸುವ ಕುರಿತು ಸಚಿವರು ಗಮನಹರಿಸಿದರು.
ರಾಯಚೂರು ತಾಲೂಕಿನ ಶಕ್ತಿನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಮಹತ್ವಾಕಾಂಕ್ಷಿ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಅಭಿವೃದ್ಧಿ ಕುರಿತು ಪರಿಶೀಲನಾ ಸಭೆ ನಡೆಸಿದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲೆಗಳ ಕಾರ್ಯಕ್ರಮದ ಅಡಿಯಲ್ಲಿ, ರಾಜ್ಯದ ಹಿಂದುಳಿದ ಜಿಲ್ಲೆಗಳಾದ ಯಾದಗಿರಿ ಮತ್ತು ರಾಯಚೂರಿನ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಜಿಲ್ಲಾಡಳಿತಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ, ಫಲಾನುಭವಿಗಳಿಗೆ ಸಿಗುತ್ತಿರುವ ಸೌಲಭ್ಯಗಳು ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ಎದುರಾಗುತ್ತಿರುವ ಅಡೆತಡೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಜಿಲ್ಲೆಗಳಲ್ಲಿನ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡುವುದು, ಅಪೌಷ್ಟಿಕತೆ ನಿವಾರಣೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳನ್ನು ಬಲಪಡಿಸುವ ಕುರಿತು ಸಚಿವರು ಒತ್ತು ನೀಡಿದರು.
ಶಾಲೆಗಳಲ್ಲಿನ ದಾಖಲಾತಿ ಪ್ರಮಾಣ ಹೆಚ್ಚಿಸುವುದು, ಮೂಲಸೌಕರ್ಯಗಳ ಸುಧಾರಣೆ ಮತ್ತು ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡಿದರು.
ರಾಯಚೂರು ಮತ್ತು ಯಾದಗಿರಿ ಕೃಷಿ ಆಧಾರಿತ ಜಿಲ್ಲೆಗಳಾಗಿರುವುದರಿಂದ, ಆಧುನಿಕ ಕೃಷಿ ಪದ್ಧತಿಗಳು, ಮಣ್ಣಿನ ಆರೋಗ್ಯ ಕಾರ್ಡ್‌ಗಳ ಬಳಕೆ ಮತ್ತು ನೀರಾವರಿ ಸೌಲಭ್ಯಗಳ ಸದ್ಬಳಕೆಯ ಕುರಿತು ಚರ್ಚಿಸಲಾಯಿತು. ’ಮುದ್ರಾ’ ಸಾಲ ಯೋಜನೆ, ಸ್ಟ್ಯಾಂಡ್ ಅಪ್ ಇಂಡಿಯಾ ಮತ್ತು ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಮತ್ತು ಯುವಕರಿಗೆ ಸ್ವಯಂ ಉದ್ಯೋಗಾವಕಾಶಗಳನ್ನು ಒದಗಿಸುವ ಕುರಿತು ಸಚಿವರು ಗಮನಹರಿಸಿದರು.
ಮಹತ್ವಾಕಾಂಕ್ಷಿ ಜಿಲ್ಲೆಗಳ ಕಾರ್ಯಕ್ರಮದ ಮೂಲ ಉದ್ದೇಶವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ಪ್ರದೇಶಗಳನ್ನು ಮುಖ್ಯವಾಹಿನಿಗೆ ತರುವುದಾಗಿದೆ. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಗಳ ನಡುವೆ ಉತ್ತಮ ಸಮನ್ವಯತೆಯನ್ನು ಸಾಧಿಸುವ ಮೂಲಕ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವುದು. ಕೇವಲ ಅಂಕಿಅಂಶಗಳಿಗಷ್ಟೇ ಸೀಮಿತವಾಗದೆ, ಜನಸಾಮಾನ್ಯರ ಜೀವನಮಟ್ಟದಲ್ಲಿ ಆಗಿರುವ ಸುಧಾರಣೆಯನ್ನು ಪ್ರತಿಬಿಂಬಿಸುವಂತಹ ಕೆಲಸಗಳು ನಡೆಯಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಸಂಜಯ್ ಲೋಹಿಯಾ, ಆಪ್ತ ಕಾರ್ಯದರ್ಶಿ ಅನಿರುದ್ಧ ಶ್ರವಣ್, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಶಾಜಿ ಕೃಷ್ಣನ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್. ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಪಂ ಸಿಇಓ ಈಶ್ವರ ಕುಮಾರ ಕಾಂದೂ,ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹೋಪಾತ್ರ, ಎಸ್ಪಿ ಅರುಣಾಂಗ್ಷು ಗಿರಿ, ಯಾದಗಿರಿ ಡಿಸಿ ರಾಹುಲ್ ತುಕಾರಾಂ ಪಾಂಡ್ವೆ ಸೇರಿ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net