ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ

ರಾಯಚೂರಿನ ಜಿಲ್ಲಾಧಿಕಾರಿ ಭವನದಲ್ಲಿ ಸೋಮವಾರ ರಾಜ್ಯ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಪಂ ಸಿಇಓ ಈಶ್ವರ ಕುಮಾರ್ ಕಾಂದೂ, ಎಸ್ಪಿ ಅರುಣಾಂಗ್ಷು ಗಿರಿ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹಾಪಾತ್ರ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು, ಅಪರ ಜಿಲ್ಲಾಧಿಕಾರಿ ಶಿವಾನಂದ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಮಹಾನಗರ ಪಾಲಿಕೆಯ ಅಡಳಿತ ವಿಭಾಗದ ಉಪ ಆಯುಕ್ತ ಶರಣಪ್ಪ ಇದ್ದರು.
ರಾಯಚೂರಿನ ಜಿಲ್ಲಾಧಿಕಾರಿ ಭವನದಲ್ಲಿ ಸೋಮವಾರ ರಾಜ್ಯ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಪಂ ಸಿಇಓ ಈಶ್ವರ ಕುಮಾರ್ ಕಾಂದೂ, ಎಸ್ಪಿ ಅರುಣಾಂಗ್ಷು ಗಿರಿ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹಾಪಾತ್ರ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು, ಅಪರ ಜಿಲ್ಲಾಧಿಕಾರಿ ಶಿವಾನಂದ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಮಹಾನಗರ ಪಾಲಿಕೆಯ ಅಡಳಿತ ವಿಭಾಗದ ಉಪ ಆಯುಕ್ತ ಶರಣಪ್ಪ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿ: ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್

ರಾಯಚೂರು ಜಿಲ್ಲೆಯಲ್ಲಿ ಕುಡಿಯುವ ನೀರು, ಘನತ್ಯಾಜ ನಿರ್ವಹಣೆ, ಕೆರೆಗಳ ಸಂರಕ್ಷಣೆ ಸೇರಿದಂತೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಜಿಲ್ಲೆಯ ಅಧಿಕಾರಿಗಳು ಶ್ರಮಿಸಬೇಕೆಂದು ರಾಜ್ಯ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್  ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಸೋಮವಾರ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾತನಾಡಿದರು. ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಾಲಕಾಲಕ್ಕೆ ಒದಗಿಸಲು ಸ್ವಂತ ಸುಪ್ರೀಂ ಕೋರ್ಟ್ನ ನಿರ್ದೇಶನವಿದ್ದು, ಸಂಬಂಧಿಸಿದ ಅಧಿಕಾರಿಗಳು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ಒದಗಿಸುವ ಮೂಲಕ ಜನರಿಗೆ ವಿವಿಧ ಸೌಲಭ್ಯಗಳನ್ನು ನೀಡುವ ವಾತಾವರಣವನ್ನು ನಿರ್ಮಾಣ ಮಾಡಲು ಶ್ರಮಿಸಬೇಕು. ಜನರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಕಾಲಕಾಲಕ್ಕೆ ಒದಗಿಸಬೇಕೆಂದರು.

ಜಿಲ್ಲೆಯಲ್ಲಿ ಮರಳುಗಾರಿಕೆ, ಅರಣ್ಯ ಸಂರಕ್ಷಣೆ ಹಾಗೂ ಗ್ರಾಮೀಣ ಭಾಗದ ಅಂಗಡಿ ಹಾಗೂ ಪಾನ್ ಬೀಡಾ ಅಂಗಡಿಗಳಲ್ಲಿ ಮದ್ಯ ಮಾರಾಟದ ಕುರಿತು ನಿಗಾ ನಿರ್ವಹಿಸಬೇಕು. ಆಕ್ರಮ ಮದ್ಯ ಮಾರಾಟದ ಮೇಲೆ ಅಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಈ ಹಿಂದೆ ಸರ್ಕಾರದಿಂದ ಮಹತ್ವ ಯೋಜನೆ ಕೈಗೊಳ್ಳಲಾಗಿದೆ. ಮಳೆ ಬರದೆ ಇರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಆರ್.ಓ ಪಾಂಟ್ಲ್ ಸಲುವಾಗಿ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಪ್ರಸ್ತುತ ಶೇ.50ರಷ್ಟು ಆರ್.ಓ ಪ್ಲಾಂಟ್‌ಗಳು ಸರಿಯಾಗಿ ನಿರ್ವಹಣೆ ಇಲ್ಲದೆ ಹಾಳಾಗಿವೆ. ಅವುಗಳನ್ನು ಸರಿಪಡಿಸಬೇಕು. ಜಿಲ್ಲೆಯ 811 ಹಳ್ಳಿಗಳ ಪೈಕಿ ಸುಮಾರು 700 ಹಳ್ಳಿಗಳಲ್ಲಿ ಆರ್.ಓ ಪ್ಲಾಂಟ್ ನೀಡಲಾಗಿದೆ. ದೇವದುರ್ಗ ಹಾಗೂ ಮಾನ್ವಿ ತಾಲ್ಲೂಕಿನ ಹಳ್ಳಿಗಳಲ್ಲಿ ಜನರಿಗೆ ಶುದ್ಧ ನೀರು ಸಿಗದ ಕಾರಣ ಆರೋಗ್ಯದ ಸಮಸ್ಯೆ ಎದುರಾದ ಕುರಿತು ಲೋಕಾಯುಕ್ತರಿಂದ ಸ್ವಯಂ ಪ್ರಕರಣಗಳು ದಾಖಲಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ 319 ಕೆರೆಗಳಿದ್ದು, ಎಲ್ಲಾ ಕೆರೆಗಳ ಮೇಲೆ ಸಾರ್ವಜನಿಕ ಹಿತಶಕ್ತಿ ಪ್ರಕರಣದಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಎರಡು ಕೆರೆಗಳನ್ನು ಹೊರತುಪಡಿಸಿ ಎಲ್ಲ ಕೆರೆಗಳು ಸರ್ವೆ ಮಾಡಲಾಗಿದೆ. ಕೆರೆಯ ಅಭಿವೃದ್ಧಿ ಕುರಿತು ಯೋಜನೆಗಳನ್ನು ರೂಪಿಸಬೇಕು. ಕೆರೆಗಳನ್ನು ಅಭಿವೃದ್ಧಿ ಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಓ ಈಶ್ವರ ಕುಮಾರ್ ಕಾಂದೂ, ಎಸ್ಪಿ ಅರುಣಾಂಗ್ಷು ಗಿರಿ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹಾಪಾತ್ರ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು, ಅಪರ ಜಿಲ್ಲಾಧಿಕಾರಿ ಶಿವಾನಂದ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಮಹಾನಗರ ಪಾಲಿಕೆಯ ಅಡಳಿತ ವಿಭಾಗದ ಉಪ ಆಯುಕ್ತ ಶರಣಪ್ಪ,  ಸದಸ್ಯ ಕಾರ್ಯದರ್ಶಿ ಕೃಷ್ಣ, ಡಿಡಿಎಲ್.ಆರ್. ರೇಷ್ಮಾ ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ತಿಮ್ಮಪ್ಪ ಬಿರಾದಾರ್, ಆಹಾರ ಇಲಾಖೆಯ ಉಪ ನಿರ್ದೇಶಕ ನಜೀರ್ ಅಹಮದ್ ಸೇರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net