ಹೊರಗುತ್ತಿಗೆ ನೌಕರರಿಗೆ ಕನಿಷ್ಟ ವೇತನ ಜಾರಿಯಾಗಲಿ

ಕನಿಷ್ಟ ವೇತನವನ್ನು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಎಐಯುಟಿಯುಸಿ ನೇತೃತ್ವದಲ್ಲಿ ರಾಯಚೂರಿನ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಬುಧವಾರ ಪ್ರತಿಭಟನೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ತಿರುಮಲರಾವ, ಕಾರ್ಯದರ್ಶಿ ಮಹೇಶ ಚೀಕಲಪರ್ವಿ, ಎನ್‌ಎಸ್ ವೀರೇಶ, ಅಣ್ಣಪ್ಪ, ಬಸವರಾಜ, ಅಂಬಿಕಾ ಇದ್ದರು.

Published on

ರಾಯಚೂರು

ಕನಿಷ್ಟ ವೇತನವನ್ನು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಎಐಯುಟಿಯುಸಿ ನೇತೃತ್ವದಲ್ಲಿ ನಗರದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಬುಧವಾರ ಪ್ರತಿಭಟನೆ ಮಾಡಿದರು.

2026 ರ ಮೇ 22ರ ಕನಿಷ್ಠ ವೇತನ ಅಧಿಸೂಚನೆಯನ್ನು ಅಮಾನತಿನಲ್ಲಿ ಇಡುವ ಹಣಕಾಸು ಇಲಾಖೆಯ ಪ್ರಸ್ತಾವನೆಯನ್ನು ತಕ್ಷಣ ತಿರಸ್ಕರಿಸಬೇಕು. ಅನುಷ್ಠಾನಕ್ಕೆ ಅಗತ್ಯವಿರುವ ಹೆಚ್ಚುವರಿ ಅನುದಾನವನ್ನು ಹಣಕಾಸು ಇಲಾಖೆಯಿಂದ ತಕ್ಷಣ ಬಿಡುಗಡೆ ಮಾಡಬೇಕು.

ಕಾರ್ಮಿಕ ಇಲಾಖೆಗೆ ಕಟ್ಟುನಿಟ್ಟಿನ ಜಾರಿ, ವಿಶೇಷ ತಪಾಸಣೆ ಹಾಗೂ ಜಾಗೃತಿ ಅಭಿಯಾನ ಮುಂದುವರಿಸಲು ನಿರ್ದೇಶನ ನೀಡಬೇಕು. ಕನಿಷ್ಠ ವೇತನ ನೀಡದ ಗುತ್ತಿಗೆದಾರರು ಹಾಗೂ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.

ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗುವ ಯಾವುದೇ ತಡೆಯಾಜ್ಞೆ ಅರ್ಜಿಗಳನ್ನು ಸರ್ಕಾರವು ಬಲವಾಗಿ ವಿರೋಧಿಸಬೇಕು. ಒಂಬತ್ತು ವರ್ಷಗಳಿಂದ ಕನಿಷ್ಠ ವೇತನ

ಪರಿಷ್ಕರಣೆಗೆ ಕಾಯುತ್ತಿರುವ ಲಕ್ಷಾಂತರ ಹೊರ ಗುತ್ತಿಗೆ ಕಾರ್ಮಿಕರ ಬದುಕು ಇಂದು ತಮ್ಮ ನಿರ್ಧಾರದ ಮೇಲೆ ನಿಂತಿದೆ. ಕಾರ್ಮಿಕರಿಗೆ ಮತ್ತೆ ಅನ್ಯಾಯವಾಗದಂತೆ ತಾವು ವೈಯಕ್ತಿಕವಾಗಿ ಮಧ್ಯ ಪ್ರವೇಶಿಸಿ, ಯಾವುದೇ ವಿಳಂಬವಿಲ್ಲದೆ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಿ, ಕಾರ್ಮಿಕ ಕುಟುಂಬಗಳಿಗೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net