ಮಹಾನಗರ ಪಾಲಿಕೆಯ ವಿವಿಧ ಕಾಮಗಾರಿಗೆ ಸಚಿವ ಚಾಲನೆ

ರಾಯಚೂರಿನ ಕೋಟೆ ಪ್ರದೇಶದ ಬಯಲು ವಾಚನಾಲಯ ಸ್ಥಳದಲ್ಲಿ ಮಹಾನಗರ ಪಾಲಿಕೆಯಿಂದ ಹಮ್ಮಿಕೊಂಡಿದ್ದ ಕೋಟೆಯ ದೀಪಾಲಂಕಾರ ಕಾಮಗಾರಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಚಾಲನೆ ನೀಡಿದರು. ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಶಾಸಕರಾದ ಬಸನಗೌಡ ದದ್ದಲ್, ಡಾ.ಶಿವರಾಜ ಪಾಟೀಲ್, ಜಿ.ಹಂಪಯ್ಯ ನಾಯಕ, ಎಂಎಲ್ಸಿ ಎ.ವಸಂತಕುಮಾರ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುಗೌಡ, ಜಿಲ್ಲಾಧಿಕಾರಿ ಕೆ.ನಿತೀಶ್, ಜಿಪಂ ಸಿಇಓ ಈಶ್ವರ ಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ,ಎಸ್ಪಿ  ಅರುಣಾಂಗ್ಶು ಗಿರಿ ಇದ್ದರು.

Published on

ರಾಯಚೂರು ನಗರದ ಕೋಟೆ ಪ್ರದೇಶದ ಬಯಲು ವಾಚನಾಲಯ ಸ್ಥಳದಲ್ಲಿ ಮಹಾನಗರ ಪಾಲಿಕೆಯಿಂದ ಹಮ್ಮಿಕೊಂಡಿದ್ದ ಕೋಟೆಯ ದೀಪಾಲಂಕಾರ ಕಾಮಗಾರಿಗೆ ಹಾಗೂ ಮಾವಿನಕೆರೆ ಹತ್ತಿರದಲ್ಲಿ ಒಳ ಚರಂಡಿ ನೀರು ತಿರುವು ಮದಲನೇ ಹಂತದ ಕಾಮಗಾರಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಚಾಲನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಯಚೂರು ಉತ್ಸವವನ್ನು ಜ.29 ರಿಂದ 31ರವರೆಗೆ ಆಚರಣೆ ಮಾಡಲು ನಿರ್ಧಾರ ಮಾಡಲಾಗಿತ್ತು. ಆದರೆ ಆ ಸಮಯದಲ್ಲಿ ಅಧಿವೇಶನ ನಡೆಯುವುದರಿಂದ ಆ ಸಮಯದಲ್ಲಿ ರಾಯಚೂರು ಉತ್ಸವವನ್ನು ರದ್ದುಗೊಳಿಸಿ, ಫೆ.5 ರಿಂದ 7ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದರು.

ರಾಯಚೂರು ಕೋಟೆಗೆ ವಿದ್ಯುತ್ ದೀಪಾಲಂಕಾರ ಮಾಡಲು 1.30 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಕೋಟೆಯ ಸೌಂದರ್ಯೀಕರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮಾವಿನ ಕೆರೆಗೆ ನಗರದ 15 ಕಡೆಗಳಿಂದ ಒಳಚರಂಡಿ ನೀರು ಬರುತ್ತಿತ್ತು. ಮೊದಲ ಹಂತದಲ್ಲಿ 2.5 ಕೋಟಿ ವೆಚ್ಚದಲ್ಲಿ 7 ಕಡೆಗಳಿಂದ ಚರಂಡಿ ನೀರು ಕೆರೆಗೆ ಹೋಗದಂತೆ ನಿಲ್ಲಿಸಿ ಅದನ್ನು ಬೇರೆ ಕಡೆ ಹರಿಯುವಂತೆ ಮಾಡಲು ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ನಂತರ ಎರಡನೇ ಹಂತದಲ್ಲಿ ಅಮೃತ ಯೋಜನೆಯಡಿ ಉಳಿದ 8 ಕಡೆಗಳಲ್ಲಿ ಕಾಮಗಾರಿಗಳನ್ನು ಮಾಡುವ ಮೂಲಕ ಕೆರೆಗೆ ಚರಂಡಿ ನೀರು ಬರುವುದನ್ನು ಸಂಪೂರ್ಣವಾಗಿ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಶಾಸಕರಾದ ಬಸನಗೌಡ ದದ್ದಲ್, ಡಾ.ಶಿವರಾಜ ಪಾಟೀಲ್, ಜಿ.ಹಂಪಯ್ಯ ನಾಯಕ, ಎಂಎಲ್ಸಿ ಎ.ವಸಂತಕುಮಾರ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುಗೌಡ, ಜಿಲ್ಲಾಧಿಕಾರಿ ಕೆ.ನಿತೀಶ್, ಜಿಪಂ ಸಿಇಓ ಈಶ್ವರ ಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ,ಎಸ್ಪಿ ಅರುಣಾಂಗ್ಶು ಗಿರಿ ಸೇರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net