_1786120215695.webp?w=480&auto=format%2Ccompress&fit=max)
_1786120215695.webp?w=480&auto=format%2Ccompress&fit=max)
ರಾಯಚೂರು
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಬುಧವಾರ ರಾಜೀನಾಮೆ ನೀಡಿದ್ದಾರೆ.
ನನ್ನ ಸ್ವ ಇಚ್ಛೆಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಈ ಕೂಡಲೇ ಅಂಗೀಕರಿಸಬೇಕೆಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಡಿಕೆ ಶಿವಕುಮಾರ ನೇತೃತ್ವದ ಸರ್ಕಾರದ ಸಚಿವ ಸಂಪುಟದಲ್ಲಿ ಜಿಲ್ಲೆಯ ಯಾವುದೇ ಶಾಸಕರಿಗೆ
ಸಚಿವ ಸ್ಥಾನ ದೊರೆತಿಲ್ಲ, ಪ್ರಬಲ ಸಚಿವಾಕಾಂಕ್ಷಿಗಳಾಗಿದ್ದ ಬಸನಗೌಡ ದದ್ದಲ್ ಅವರು ಕೂಡಾ ಸಚಿವ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆಸಿದ್ದರು.
ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರಾ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.