ಸಿಂಧನೂರು: ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಅನುದಾನ ನಿರೀಕ್ಷಿಸಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ನಗರಕ್ಕೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದರು.
ಲೋಕೋಪಯೋಗಿ ಇಲಾಖೆಯು ರಾಜ್ಯದ ಎಲ್ಲ ಕ್ಷೇತ್ರದ ರಸ್ತೆ, ಸೇತುವೆ, ಕಟ್ಟಡಗಳಿಗೆ ಅನುದಾನ ದೊರೆಯುವಂತೆ ವ್ಯವಸ್ಥೆ ಮಾಡಿದ್ದು, ಶಾಸಕರ ಬೇಡಿಕೆಗೆ ಅನುಗುಣವಾಗಿಯೇ ಅನುದಾನ ಒದಗಿಸಲಾಗುವುದು.
ರಾಜ್ಯದ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಿ, ಪ್ರಯಾಣಿಕರ ಸಂಚಾರಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಡಲಾಗಿದೆ ಎಂದರು. ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ಎಂಎಲ್ಸಿ ಬಸನಗೌಡ ಬಾದರ್ಲಿ, ಆರ್‌ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಪಂಪನಗೌಡ ಬಾದರ್ಲಿ ಇತರರಿದ್ದರು.