ಚಿತ್ರಕಲೆ ಸ್ಪರ್ಧೆ ಕುರಿತು ಮಹಾನಗರ ಪಾಲಿಕೆಯ ವಲಯ ಆಯುಕ್ತ ಮಲ್ಲಿಕಾರ್ಜುನ ಬಿ.ಎಂ. ಮಾತನಾಡಿ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯೇ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದ್ದು, ನಗರದಲ್ಲಿ ಹಲವು ಕಡೆಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಎಸೆಯುವ ಪರಿಣಾಮ ಬ್ಲಾಕ್‌ಸ್ಪಾಟ್ ಗಳು ನಿರ್ಮಾಣವಾಗುತ್ತಿವೆ. ತ್ಯಾಜ್ಯದ ಸಮರ್ಪಕ ವಿಲೇವಾರಿ ಹಾಗೂ ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಾಲಿಕೆ ವಿವಿಧ ಕಾರ್ಯಕ್ರಮಗ ಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.