ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

 ರಾಯಚೂರಿನ ಕನ್ನಡ ಭವನದಲ್ಲಿ ಗುರುವಾರ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಯೋಜನೆ ಮಾಡಲಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜಯಂತಿ ಕಾರ್ಯಕ್ರಮವನ್ನು ಉಪನ್ಯಾಸಕ ಗೋವರ್ಧನ ರೆಡ್ಡಿ ಉದ್ಘಾಟಿಸಿದರು. ವಿಶ್ರಾಂತ ಪ್ರಾಚಾರ್ಯ ಡಾ. ಪರಮೇಶ್ವರ ಸಾಲಿಮಠ, ಜಿಲ್ಲಾ ಕಸಾಪ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ಸಾಹಿತಿ ರಾಜಶ್ರೀ ಕಲ್ಲೂರುಕರ, ಬಾಲಕೀಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಕುಂಟೆಪ್ಪ ಗೌರಿಪುರ, ಕಸಾಪ ತಾಲೂಕಾಧ್ಯಕ್ಷ ಡಾ.ಬಿ.ವಿಜಯರಾಜೇಂದ್ರ, ಪ್ರತಿಭಾ ಗೋನಾಳ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಕೃಷ್ಣರಾಜ ಒಡೆಯರು ಪ್ರಜಾಪ್ರಭುತ್ವವಾದಿಯಾಗಿದ್ದರು
  • ಉಪನ್ಯಾಸಕ ಗೋವರ್ಧನ ರೆಡ್ಡಿ ಅಭಿಮತ
ರಾಯಚೂರು ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ನಡ ಸೇರಿದಂತೆ ಉರ್ದು, ಪಾರ್ಸಿ, ಸಂಸ್ಕೃತ ಭಾಷೆಗಳಲ್ಲಿ ವಿಶೇಷವಾದ ಪಾಂಡಿತ್ಯವನ್ನು ಹೊಂದಿದ್ದರು. ಜೊತೆಗೆ ರಾಜ್ಯದ ಆಡಳಿತ ನಡೆಸುವಲ್ಲಿ ಕೃಷ್ಣರಾಜ ಒಡೆಯರು ಪ್ರಜಾಪ್ರಭುತ್ವ ವಾದಿಯಾಗಿದ್ದರೆಂದು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗೋವರ್ಧನ ರೆಡ್ಡಿ ಹೇಳಿದರು.
ನಗರದ ಕನ್ನಡ ಭವನದಲ್ಲಿ ಗುರುವಾರ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಯೋಜನೆ ಮಾಡಲಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ದೇಶದಲ್ಲಿ ರಾಜ ಮನೆತನದ ವ್ಯವಸ್ಥೆ ಇತ್ತು. ಅಂತಹ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಹಿತಿಕ ಹಾಗೂ ನೀರಾವರಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರವಾದದ್ದು. ರಾಜ್ಯದ ಆಡಳಿತ ನಡೆಸುವಲ್ಲಿ ಕೃಷ್ಣರಾಜ ಒಡೆಯರು ಪ್ರಜಾಪ್ರಭುತ್ವವಾದಿಯಾಗಿದ್ದರು ಎಂದು ತಿಳಿಸಿದರು.
ಸಾಹಿತ್ಯ ಕ್ಷೇತ್ರಕ್ಕೆ ನಾಲ್ವಡಿ ಕೃಷ್ಣರಾಜರ ಕೊಡುಗೆ ಅಪಾರವಾಗಿದ್ದು, ಸಾಹಿತ್ಯ ಚಟುವಟಿಕೆಗಳಿಗೆ ನಿರಂತರವಾಗಿ ಬೆಂಬಲವನ್ನು ನೀಡುತ್ತಿದ್ದರು. ಅದಕ್ಕೆ ಸಾಕ್ಷಿಯಂತೆ ತಮ್ಮ ಆಡಳಿತ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದರು ಎಂದರು.
ವಿಶ್ರಾಂತ ಪ್ರಾಚಾರ್ಯ ಡಾ. ಪರಮೇಶ್ವರ ಸಾಲಿಮಠ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರಿಗೆ ವಿಶೇಷವಾದ ಸ್ಥಾನವಿದ್ದು, ಪ್ರಜೆಗಳ ಯೋಗಕ್ಷೇಮ, ಅವರ ಕುಂದುಕೊರತೆಗಳನ್ನು ನಿವಾರಿಸುವಲ್ಲಿ ವಿಶೇಷವಾದ ಕಾಳಜಿಯನ್ನು ಹೊಂದಿದ್ದರು. ನೀರಾವರಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯನ್ನು ಅವರು ನೀಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ಸಾಹಿತಿ ರಾಜಶ್ರೀ ಕಲ್ಲೂರುಕರ, ಬಾಲಕೀಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಕುಂಟೆಪ್ಪ ಗೌರಿಪುರ, ಕಸಾಪ ತಾಲೂಕಾಧ್ಯಕ್ಷ ಡಾ.ಬಿ.ವಿಜಯರಾಜೇಂದ್ರ, ಪ್ರತಿಭಾ ಗೋನಾಳ ಸೇರಿದಂತೆ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net