ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ ಆಚರಣೆ

ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನದ ನಿಮಿತ್ತ ರಾಯಚೂರಿನ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಗುರುವಾರ ಜಿಪಂ ಸಿಇಓ ಈಶ್ವರ್ ಕುಮಾರ್ ಕಾಂದೂ ನೇತೃತ್ವದಲ್ಲಿ ಪ್ರತಿಜ್ಞಾ ವಿಧಿಯನ್ನು ಭೋದಿಸುವ ಮೂಲಕ ಆಚರಣೆ ಮಾಡಲಾಯಿತು. ಜಿಪಂ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಯೊಜನಾ ನಿರ್ದೇಶಕ ಶರಣಬಸವರಾಜ ಕೆ, ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ ಇದ್ದರು.

Published on
ರಾಯಚೂರು
ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನದ ನಿಮಿತ್ತ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಗುರುವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ ಅವರ ನೇತೃತ್ವದಲ್ಲಿ ಪ್ರತಿಜ್ಞಾ ವಿಧಿಯನ್ನು ಭೋದಿಸುವ ಮೂಲಕ ಆಚರಣೆ ಮಾಡಲಾಯಿತು.

ಪ್ರತಿ ವರ್ಷ ಮೇ 21 ರಂದು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷವೂ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲು ಉದ್ದೇಶಿಸಲಾಗಿದೆ. ಭಯೋತ್ಪಾದನೆ ಮಟ್ಟಹಾಕಲು ಎಲ್ಲರ ಸಹಕಾರ ಅಗತ್ಯ. ಸ್ವಾರ್ಥ ಬಿಟ್ಟು ರಾಜ್ಯ ಹಾಗೂ ದೇಶದ ಹಿತ ದೃಷ್ಟಿಯಿಂದ ಭಯೋತ್ಪಾದನೆ ವಿರುದ್ಧ ಎಚ್ಚೆತ್ತುಕೊಳ್ಳಬೇಕಿದೆ ಎಂದರು.

ಭಯೋತ್ಪಾದನಾ ಕೃತ್ಯಗಳ ವಿರುದ್ಧ ಜಾಗೃತರಾಗದಿದ್ದಲ್ಲಿ ಸಮಾಜಘಾತಕ ಶಕ್ತಿಗಳು ಹಾಗೂ ಭಯೋತ್ಪಾದಕರು ಅಮಾನುಷ ಕೃತ್ಯಗಳನ್ನು ಮುಂದುವರೆಸುವರು. ಇದರಿಂದ ಅಮಾಯಕರು ಜೀವ ಕಳೆದುಕೊಳ್ಳುವ ಜೊತೆಗೆ ದೇಶದ ಅಭಿವೃದ್ಧಿ ಕುಂಟಿತಗೊಳ್ಳುವುದು ಎಂದರು.

ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಯೊಜನಾ ನಿರ್ದೇಶಕ ಶರಣಬಸವರಾಜ ಕೆ, ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ ಸೇರಿದಂತೆ ಕಚೇರಿಯ ಸಿಬ್ಬಂದಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net