ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಗ್ರಾಹಕರ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ: ಕೆ.ವಿ.ಸುರೇಂದ್ರ ಕುಮಾರ್

ರಾಯಚೂರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ  ಕಾನೂನು ಮಾಪನ ಶಾಸ್ತ ಇಲಾಖೆಯ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮಕ್ಕೆ  ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಕೆ.ವಿ.ಸುರೇಂದ್ರ ಕುಮಾರ್ ಚಾಲನೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ  ಹೆಚ್.ಎ.ಸಾತ್ವಿಕ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ಪ್ರಭುದೇವ್, ಆಹಾರ ಇಲಾಖೆಯ ಉಪ ನಿರ್ದೇಶಕ ನಜೀರ್ ಅಹಮದ್, ಜಿಲ್ಲಾ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ನಜೀರ್, ವಕೀಲರಾದ ಗೌರೀಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರಿ, ಕಾನೂನು ಮಾಪನ ಶಾಸ್ತ ಇಲಾಖೆಯ ಸಹಾಯಕ ನಿಯಂತ್ರಕ ಅಮೃತಾ ಪಿ.ಚವ್ಹಾಣ, ಆಹಾರ ನಾಗರಿಕ ಮತ್ತು ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕ ಪ್ರಕಾಶ್, ಹರೀಶ್ ಇದ್ದರು.

Published on
ರಾಯಚೂರು ಗ್ರಾಹಕರ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆಯಾಗಿದೆ. ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕೆಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಕೆ.ವಿ.ಸುರೇಂದ್ರ ಕುಮಾರ್ ಹೇಳಿದರು.
ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ ಇಲಾಖೆಯ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಯುವುದು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ. ಖರೀದಿದಾರನ ಯೋಗಕ್ಷೇಮದ ದೃಷ್ಟಿಯಲ್ಲಿ ಗ್ರಾಹಕ ಹಕ್ಕುಗಳ ಬಗ್ಗೆ ಅರಿಯುವುದು ಅವಶ್ಯಕತೆಯಿದೆ. ಗ್ರಾಹಕರ ರಕ್ಷಣೆ ಸಮಾಜದ ಧ್ವನಿಯಾದಾಗ ಮಾತ್ರ ಗ್ರಾಹಕರ ಸಂರಕ್ಷಣೆ ಸಾಧ್ಯ ಎಂದರು.
ಉತ್ಪನ್ನಗಳನ್ನು ಖರೀದಿಸುವಾಗ ಹೆಚ್ಚಿನ ಲಾಭದ ಸಲುವಾಗಿ ಕೆಲ ಮಾರಾಟಗಾರರು ಹೆಚ್ಚಿನ ಶುಲ್ಕವನ್ನು ವಿಧಿಸಿ ಗ್ರಾಹಕರಿಗೆ ವಂಚಿಸುತ್ತಾರೆ. ಮಾರಾಟಗಾರರಿಂದ ಆಗುವ ವಂಚನೆಯಿಅದ ತಪ್ಪಿಸಿಕೊಳ್ಳಲು ಏನು ಮಾಡಬೇಕು ಎಂಬುದು ಸೇರಿದಂತೆ ಬೇರೆ ಬೇರೆ ವಿಷಯ ತಿಳಿಯುವುದು ಸೇರಿದಂತೆ ಜನಜಾಗೃತಿಗಾಗಿ ರಾಷ್ಟಿಥಯ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ ಎಂದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಒಂದು ವರ್ಷದೊಳಗೆ ಸುಮಾರು 10 ಕೋಟಿ ರೂ.ಗಳಿಗೂ ಹೆಚ್ಚು ದಂಡವನ್ನು ವಿಧಿಸಲಾಗಿದೆ. ಕಲ್ಯಾಣ ಕರ್ನಾಟಕ ವಿಭಾಗವು ಹಿಂದುಳಿದ ಪ್ರದೇಶವಾಗಿದೆ. ಇಲ್ಲಿನ ಎಲ್ಲ ಜನರು ಸರಿಯಾಗಿ ಕಾನೂನು ತಿಳಿದುಕೊಂಡು ಈ ಭಾಗವನ್ನು ಅಭಿವೃದ್ಧಿ ಮಾಡಲು ಪ್ರತಿಯೊಬ್ಬರು ಶ್ರಮಿಸಬೇಕೆಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಎ.ಸಾತ್ವಿಕ್ ಮಾತನಾಡಿ, ಪ್ರತಿವರ್ಷ ಡಿ.24 ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನ ಆಚರಿಸಲಾಗುತ್ತದೆ. ಗ್ರಾಹಕರಿಗೆ ಸಂಬಅಧಿಸಿದ ಕಾಯಿದೆ ಕಾನೂನು ಸೇರಿದಂತೆ ಬೇರೆ ಬೇರೆ ಅಂಶಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗಬೇಕು. ಗ್ರಾಹಕರು ಯಾವುದೇ ವಸ್ತು, ಸರಕುಗಳನ್ನು ಖರೀದಿಸುವ ಸಂದರ್ಭದಲ್ಲಿ ಆ ವಸ್ತುವಿನ ಗುಣಮಟ್ಟ, ಅವಧಿ ಮುಂತಾಗಿ ಪರಿಶೀಲಿಸಿ ಕಡ್ಡಾಯವಾಗಿ ರಸೀದಿ ಪಡೆದುಕೊಳ್ಳಬೇಕು. ಅಲ್ಲದೆ ಖರೀದಿಸಿದ ವಸ್ತುವಿನ ಗುಣಮಟ್ಟ ಕಳಪೆ ಮತ್ತು ದೋಷಪೂರಿತವಾಗಿದ್ದಲ್ಲಿ ಗ್ರಾಹಕರು ರಶೀದಿಯೊಂದಿಗೆ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದರೆ ಗ್ರಾಹಕರಿಗೆ ಕಾನೂನಿನಡಿ ಸೂಕ್ತ ಪರಿಹಾರ ಒದಗಿಸಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ಪ್ರಭುದೇವ್ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕ ನಜೀರ್ ಅಹಮದ್, ಜಿಲ್ಲಾ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ನಜೀರ್, ವಕೀಲರಾದ ಗೌರೀಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರಿ, ಕಾನೂನು ಮಾಪನ ಶಾಸ್ತ ಇಲಾಖೆಯ ಸಹಾಯಕ ನಿಯಂತ್ರಕ ಅಮೃತಾ ಪಿ.ಚವ್ಹಾಣ, ಆಹಾರ ನಾಗರಿಕ ಮತ್ತು ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕ ಪ್ರಕಾಶ್, ಹರೀಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net