ಕೃಷಿ ವಿವಿಯಲ್ಲಿ ರಾಷ್ಟ್ರ ಧ್ವಜಾರೋಹಣ

ರಾಯಚೂರಿನ  ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ  80ನೇ  ಸ್ವಾತಂತ್ರೃ ದಿನಾಚರಣೆ ಅಂಗವಾಗಿ ಕುಲಪತಿ ಡಾ.ಎಂ.ಹನುಮಂತಪ್ಪ ಅವರು ಶನಿವಾರ ರಾಷ್ಟ್ರ ಧ್ವಜಾರೋಹಣ ಮಾಡಿದರು. ವಿವಿಯ ವ್ಯವಸ್ಥಾಪನಾ ಮಂಡಳಿಯ ಸದಸ್ಯರುಗಳಾದ ಮಲ್ಲೇಶ್ ಕೋಲಿಮಿ, ರೇಣುಕಾ ಪಿರಂಗಿ,ಡಾ.ಬಿ.ಕೆ.ದೇಸಾಯಿ, ಅಧಿಕಾರಿಗಳಾದ ಡಾ. ಗುರುರಾಜ್ ಸುಂಕದ, ಡಾ.ಪ್ರಭುರಾಜ್ ಎ.,ಡಾ.ಎ.ಆರ್. ಕುರುಬರ, ಜಾಗೃತಿ ಬಿ. ದೇಶಮಾನ್ಯ, ಡಾ.ಎ.ಜಿ.ಶ್ರೀನಿವಾಸ್ ಇದ್ದರು.

Published on

ನಗರದ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ 80ನೇ ಸ್ವಾತಂತ್ರೃ ದಿನಾಚರಣೆ ಅಂಗವಾಗಿ ಕುಲಪತಿ ಡಾ.ಎಂ.ಹನುಮಂತಪ್ಪ ಅವರು ಶನಿವಾರ ರಾಷ್ಟ್ರ ಧ್ವಜಾರೋಹಣ ಮಾಡಿದರು.

ನಂತರ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನಗಳನ್ನು ಸ್ಮರಿಸಿ ತಮ್ಮ ಭಾಷಣದಲ್ಲಿ ವಿಶ್ವವಿದ್ಯಾಲಯದ ಸಾಧನೆಗಳು, ಶೈಕ್ಷಣಿಕ, ಸಂಶೋಧನೆ ಮತ್ತು ಕೃಷಿ ವಿಸ್ತರಣಾ ಚಟುವಟಿಕೆಗಳ ಕುರಿತು ಸಮಗ್ರವಾಗಿ ವಿವರಿಸಿದರು.
ಕೃಷಿ ತಾಂತ್ರಿಕ ಮಹಾವಿದ್ಯಾಲಯದ 7 ವಿದ್ಯಾರ್ಥಿಗಳು ಪ್ರವೇವ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯೊಂದಿಗೆ ತೇರ್ಗಡೆಯಾಗಿ ಐಐಟಿ ಹಾಗೂ ಪ್ರಖ್ಯಾತ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣಕ್ಕೆ ಅರ್ಹತೆ ಪಡೆದಿದ್ದಾರೆ. ವಿಶ್ವವಿದ್ಯಾಲಯದ ಉದ್ಯೋಗ ನಿಯೋಜನೆ ಕೋಶದ ಮೂಲಕ ಹಲವು ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net