ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಭೆ

ರಾಯಚೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅಧ್ಯಕ್ಷತೆಯಲ್ಲಿ  ಕುಡಿಯುವ ನೀರಿನ ಸಮಸ್ಯೆಗಳು, ಮುಂಗಾರು ಹಂಗಾಮಿನ ಬಿತ್ತನೆ ಮತ್ತು ರಸಗೊಬ್ಬರ ಬೇಡಿಕೆಗಳು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ನಡೆದ ಸಭೆ ನಡೆಯಿತು. ಸಂಸದ ಜಿ.ಕುಮಾರ ನಾಯಕ, ಶಾಸಕರಾದ  ಬಸನಗೌಡ ದದ್ದಲ್,ಆರ್.ಬಸನಗೌಡ ತುರ್ವಿಹಾಳ, ಜಿ.ಹಂಪಯ್ಯ ಎಂಎಲ್ಸಿ ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಪಂ ಸಿಇಓ ಈಶ್ವರ ಕುಮಾರ್ ಕಾಂದೂ ಇದ್ದರು.
ರಾಯಚೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು, ಮುಂಗಾರು ಹಂಗಾಮಿನ ಬಿತ್ತನೆ ಮತ್ತು ರಸಗೊಬ್ಬರ ಬೇಡಿಕೆಗಳು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ನಡೆದ ಸಭೆ ನಡೆಯಿತು. ಸಂಸದ ಜಿ.ಕುಮಾರ ನಾಯಕ, ಶಾಸಕರಾದ ಬಸನಗೌಡ ದದ್ದಲ್,ಆರ್.ಬಸನಗೌಡ ತುರ್ವಿಹಾಳ, ಜಿ.ಹಂಪಯ್ಯ ಎಂಎಲ್ಸಿ ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಪಂ ಸಿಇಓ ಈಶ್ವರ ಕುಮಾರ್ ಕಾಂದೂ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ ಮಾಡಿ: ಉಸ್ತುವಾರಿ ಸಚಿವ
ರಾಯಚೂರು ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆಯಾಗದಂತೆ ದಾಸ್ತಾನು ಮಾಡಿಕೊಳ್ಳಬೇಕು. ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರವನ್ನು ಕಾಲಕಾಲಕ್ಕೆ ರೈತರಿಗೆ ವಿತರಣೆ ಮಾಡಬೇಬೆಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು, ಮುಂಗಾರು ಹಂಗಾಮಿನ ಬಿತ್ತನೆ ಮತ್ತು ರಸಗೊಬ್ಬರ ಬೇಡಿಕೆಗಳು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಖಾಸಗಿ ಅಂಗಡಿಗಳಲ್ಲಿ ಇರುವ ದಾಸ್ತಾನುಗಳ ಬಗ್ಗೆ ಫಲಕ ಪ್ರದರ್ಶನ ಮಾಡಬೇಕು.
ರೈತರಿಂದ ಹೆಚ್ಚುವರಿ ಹಣವನ್ನು ಸ್ವೀಕರಿಸದಂತೆ ನೋಡಿಕೊಳ್ಳಬೇಕು. ಕೃಷಿ ಇಲಾಖೆಯ ಅಧಿಕಾರಿಗಳು ಆಗಾಗ ರಸಗೊಬ್ಬರ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಕಳ್ಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ಅಂತಹ ಅಂಗಡಿಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಜಿಲ್ಲೆಯಲ್ಲಿ ಇನ್ನೂಬ ಬಿತ್ತನೆಗೆ ಸಮಯವಿದ್ದು, ಬಿತ್ತನೆ ಬೀಜಗಳ ವಿತರಣೆ ಅಗತ್ಯ ಕ್ರಮವಹಿಸಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ರೈತರಿಂದ ಬೆಳೆ ವಿಮೆಗೆ ಮಾಡಿಸಲು ಅಗತ್ಯ ಪ್ರಚಾರ ಕೈಗೊಳ್ಳಬೇಕು. ತಾಲೂಕು ಮಟ್ಟದ ಅಧಿಕಾರಿಗಳು ರೈತರಿಗೆ ಈ ಬಗ್ಗೆ ಮಾಹಿತಿ ನೀಡಬೇಕು. 75 ಸಾವಿರ ರೈತರ ಪೈಕಿ 75 ಸಾವಿರ ರೈತರು ಬೆಳೆ ವಿಮೆಯಲ್ಲಿ ನೋಂದಣಿಯಾಗಬೇಕು. ಜಿಲ್ಲೆಯಲ್ಲಿ 2026ನೇ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲೆಯ 83 ಪಂಚಾಯತಗಳ ಪೈಕಿ 202 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಿಸಬಹುದಾಗಿದೆ ಎಂದು ಅಂದಾಜಿಸಲಾಗಿದೆ. ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಸಭೆ ಮಾಡಿ, ನೀರಿನ ಸಮಸ್ಯೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಳೆ ಆಗದೇ ಇರುವ ಕಾರಣಕ್ಕೆ ಖಾಸಗಿ ಬೋರವೆಲ್ ನಿಂದ ಕುಡಿಯುವ ನೀರಿನ ಕಾಮಗಾರಿಯನ್ನು ಮುಂದುವರಿಬೇಕು.
ಕಾಲಕಾಲಕ್ಕೆ ಅನುದಾನವನ್ನು ಸಂಬಂಧಿಸಿದ ಮಾಲೀಕರಿಗೆ ಪಾವತಿಸಬೇಕು. ನಿರ್ಲಕ್ಷ್ಯ ತೋರಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಜಿಲ್ಲೆಯ 38 ಕೆರೆಯಲ್ಲಿ ಶೇ.76 ರಿಂದ ಶೇ.100ರಷ್ಟು ಕೆರೆಗಳನ್ನು ಮಾತ್ರ ತುಂಬಿಸಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೆರೆಗಳನ್ನು ತುಂಬಿಸಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು. ರಾಯಚೂರು ನಗರಕ್ಕೆ ನೀಎಇನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ಕೃಷ್ಣ ನದಿಯಿಂದ ನೀರನ್ನು ಲಿಪ್ಟ್ ಮಾಡಿ, ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕಾಲುವೆಗಳ ನಾಲೆಗಳನ್ನು ಸ್ವಚ್ಛಗೊಳಿಸಬೇಕು. ನರೇಗಾ ಯೋಜನೆಯಡಿ ಕಾಲುವೆ ಹಾಗೂ ಕೆರೆಗಳ ಹುಳ ತೆಗೆಯಲು ವ್ಯವಸ್ಥೆ ಮಾಡಬೇಕು.
ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಬಸನಗೌಡ ದದ್ದಲ್ ಮಾತನಾಡಿ, ಜಿಲ್ಲೆಯಲ್ಲಿ ನಷ್ಟಕ್ಕೆ ಹಿಡಿದಾ ರೈತರ ಪಟ್ಟಿ ಸಿದ್ದ ಮಾಡಿ ಕೃಷಿ ಇಲಾಖೆಯ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಖಾಸಗಿ ಬೋರ್‌ವೆಲ್ ಮಾಲೀಕರಿಗೆ ಯಾವ ಯಾವ ಯೋಜನೆಯಡಿ ಅನುದಾನವನ್ನು ಬಿಡುಗಡೆ ಮಾಡಬೇಕು. ಎಂಬುದನ್ನು ಸ್ಪಷ್ಟವಾಗಿ ಅಧಿಕಾರಿಗಳಿಗೆ ಜಿ.ಪಂ ಸಿಇಒ ಅವರು ನಿರ್ದೇಶನ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಸಂಸದ ಜಿ.ಕುಮಾರ ನಾಯಕ, ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಜಿ.ಹಂಪಯ್ಯ ಎಂಎಲ್ಸಿ ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಪಂ ಸಿಇಓ ಈಶ್ವರ ಕುಮಾರ್ ಕಾಂದೂ,ಎಸ್ಪಿ ಅರುಣಾಂಗ್ಷು ಗಿರಿ., ಪಾಲಿಕೆಯ ಆಯುಕ್ತ ಜುಬಿನ್ ಮಹೋಪಾತ್ರ ಸೇರಿ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net