ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತನಿಖೆ ನಡೆಸಿ

ಲಿಂಗಸುಗೂರಿನಲ್ಲಿ ಎಸಿ ಕಚೇರಿಯ ಎಫ್‌ಡಿಎ ಅನುಪಮಾ ಸಿಂಗ್‌ಗೆ ಕರ್ನಾಟಕ ಉತ್ತರ ಎಬಿವಿಪಿ ಕಾರ್ಯಕರ್ತರು ಮನವಿ ಸಲ್ಲಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯ ತರುಣಗೌಡ ಪಾಟೀಲ್, ಬಸವರಾಜ, ಶೀಲವಂತ, ವಿಜಯ ಮೇಟಿ ಇತರರಿದ್ದರು.
ಲಿಂಗಸುಗೂರಿನಲ್ಲಿ ಎಸಿ ಕಚೇರಿಯ ಎಫ್‌ಡಿಎ ಅನುಪಮಾ ಸಿಂಗ್‌ಗೆ ಕರ್ನಾಟಕ ಉತ್ತರ ಎಬಿವಿಪಿ ಕಾರ್ಯಕರ್ತರು ಮನವಿ ಸಲ್ಲಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯ ತರುಣಗೌಡ ಪಾಟೀಲ್, ಬಸವರಾಜ, ಶೀಲವಂತ, ವಿಜಯ ಮೇಟಿ ಇತರರಿದ್ದರು.
Published on
bನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕರ್ನಾಟಕ ಉತ್ತರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಿಂದ ಸಹಾಯಕ ಆಯುಕ್ತ ಕಚೇರಿಯ ಎಫ್‌ಡಿಎ ಅನುಪಮಾ ಸಿಂಗ್‌ಗೆ ಬುಧವಾರ ಮನವಿ ಸಲ್ಲಿಸಲಾಯಿತು. 
ನೀಟ್-ಯುಜಿ ಪರೀಕ್ಷೆಯ ಗೌಪ್ಯತೆ ಮತ್ತು ವಿಶ್ವಾಸಾರ್ಹತೆ ಗಂಭೀರ ಪ್ರಶ್ನೆಯಾಗಿದೆ. ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ಪರೀಕ್ಷಾ ವ್ಯವಸ್ಥೆ ಅನಿಶ್ಚಿತತೆ ಉಂಟು ಮಾಡಿದೆ. ವರ್ಷಪೂರ್ತಿ ಶ್ರಮ ಪಟ್ಟು ತಯಾರಿ ನಡೆಸಿದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನ್ಯಾಯವಾಗಿದೆ. ಪರೀಕ್ಷಾ ಮಾಫಿಯಾ ಸೇರಿದಂತೆ ಸಹಕಾರ ನೀಡಿರುವ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 
ಕರ್ನಾಟಕ ಉತ್ತರ ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ತರುಣಗೌಡ ಪಾಟೀಲ್, ಬಸವರಾಜ, ಶೀಲವಂತ, ವಿಜಯ ಮೇಟಿ, ಸೋನುಕಿರಣ, ಸರ್.ಎಂ ವಿಶ್ವೇಶ್ವರಯ್ಯ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net