ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ

ಬಸನಗೌಡ ತುರ್ವಿಹಾಳ
ಬಸನಗೌಡ ತುರ್ವಿಹಾಳ
Published on

ಪ್ರಮುಖ ಮುಖ್ಯಾಂಶಗಳು

  • ತಜ್ಞರ ಅಭಿಪ್ರಾಯ
  • ಬೇಸಿಗೆ ಬೆಳೆಗೆ ನೀರು
  • ತುಂಗಭದ್ರಾ ಜಲಾಶಯ

ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ

ಸಿಂಧನೂರು: ವಿರೋಧ ಪಕ್ಷದ ಸದಸ್ಯರು ಹಾಗೂ ಮುಖಂಡರು ಬೇಸಿಗೆ ಬೆಳೆಗೆ ನೀರು ಹರಿಸುವ ವಿಚಾರದಲ್ಲಿ ಸರ್ಕಾರದ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡಿ ರೈತರಲ್ಲಿ ಗೊಂದಲ ಉಂಟು ಮಾಡುತ್ತಿದ್ದು, ಐಸಿಸಿ ಸಲಹಾ ಸಮಿತಿ ತೀರ್ಮಾನಕ್ಕಾಗಿ ಕಾಯಬೇಕು ಎಂದು ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ತುಂಗಭದ್ರಾ ಜಲಾಶಯದ ಸ್ಥಿತಿಗತಿ ಕುರಿತು ತಿಳಿಸಲಾಗಿದೆ. ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ಕಳಚಿದಾಗ ಸರ್ಕಾರ ಮುತುವರ್ಜಿಯಿಂದ ಸಮಸ್ಯೆ ಸರಿಪಡಿಸಿ ಕೃಷಿಗೆ ನೀರು ಹರಿಸಿತ್ತು. ಸರ್ಕಾರ ರೈತರ ವಿಚಾರದಲ್ಲಿ ನಿರ್ಲಕ್ಷೃ ಮಾಡಿಲ್ಲ. ಆದರೆ, ಅನವಶ್ಯಕವಾಗಿ ಸರ್ಕಾರವನ್ನು ದೂರುವುದು ಸರಿಯಲ್ಲ. ನ.5 ರಂದು ಐಸಿಸಿ ಸಲಹಾ ಸಮಿತಿ ಸಭೆ ಕರೆಯಲಾಗಿದ್ದು, ಶಾಸಕರು ಸೇರಿ ಪ್ರಮುಖರು ಭಾಗವಹಿಸಲಿದ್ದಾರೆ. ತಜ್ಞರ ಅಭಿಪ್ರಾಯದ ಆಧಾರದ ಮೇಲೆ ಬೇಸಿಗೆ ಬೆಳೆಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ಸಭೆ ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಯಾದರೆ ಕಕ ಭಾಗದ ಎಸ್ಟಿ ಕೋಟಾದಲ್ಲಿ ರಾಯಚೂರು ಜಿಲ್ಲೆಯಿಂದ ನನಗೆ ಸಚಿವ ಸ್ಥಾನ ನೀಡುವಂತೆ ಕೇಳುವೆ ಎಂದರು.
ಗ್ರಾಮೀಣ ಘಟಕದ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಮೀದ್ ಸಾಬ್, ಪ್ರಮುಖರಾದ ಮಲ್ಲಿಕಾರ್ಜುನ ಯದ್ದಲದಿನ್ನಿ, ಸಿದ್ದನಗೌಡ ಮಾಟೂರು, ನಿರುಪಾದೆಪ್ಪ ಗುಡಿಹಾಳ, ಬಸವರಾಜ ಕುರಕುಂದ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net