ಗುಣಮಟ್ಟದ ಕುರಿತು ದೂರುಗಳು ಬಾರದಿರಲಿ

ಜೋಳದರಾಶಿ ಆಂಜನೇಯ ದೇವಸ್ಥಾನದ ಬಳಿ ಸಿಂಧನೂರಿನ ಪಿಡಬ್ಲ್ಯುಡಿ ಕ್ಯಾಂಪ್‌ನಿಂದ ಮಾಡಸಿರವಾರವರೆಗಿನ ಒಂಬತ್ತು ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಂಪನಗೌಡ ಬಾದರ್ಲಿ ಭೂಮಿಪೂಜೆ ನೆರವೇರಿಸಿದರು.
ಜೋಳದರಾಶಿ ಆಂಜನೇಯ ದೇವಸ್ಥಾನದ ಬಳಿ ಸಿಂಧನೂರಿನ ಪಿಡಬ್ಲ್ಯುಡಿ ಕ್ಯಾಂಪ್‌ನಿಂದ ಮಾಡಸಿರವಾರವರೆಗಿನ ಒಂಬತ್ತು ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಂಪನಗೌಡ ಬಾದರ್ಲಿ ಭೂಮಿಪೂಜೆ ನೆರವೇರಿಸಿದರು.
Published on
ಸಿಂಧನೂರು: ನಗರದ ಪಿಡಬ್ಲ್ಯುಡಿ ಕ್ಯಾಂಪ್‌ನಿಂದ ಮಾಡಸಿರವಾರವರೆಗಿನ ಒಂಬತ್ತು ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಂಪನಗೌಡ ಬಾದರ್ಲಿ ಜೋಳದರಾಶಿ ಆಂಜನೇಯ ದೇವಸ್ಥಾನದ ಬಳಿ ಭಾನುವಾರ ಭೂಮಿಪೂಜೆ ನೆರವೇರಿಸಿದರು.
ಗ್ರಾಮೀಣ ಪ್ರದೇಶದ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ರಸ್ತೆಗಳ ನಿರ್ಮಾಣದಿಂದ ಗ್ರಾಮಸ್ಥರಿಗೆ ಅನುಕೂಲವಾಗಲಿದೆ. ಪಿಡಬ್ಲ್ಯುಡಿ ಕ್ಯಾಂಪ್‌ನಿಂದ ಮಾಡಸಿರವಾರವರೆಗಿನ ರಸ್ತೆ ಬಹುದಿನಗಳಿಂದ ಹಾಳಾಗಿದ್ದರಿಂದ ಲೋಕೋಪಯೋಗಿ ಇಲಾಖೆಯ ಒಂಬತ್ತು ಕೋಟಿ ರೂ. ವೆಚ್ಚದಲ್ಲಿ ಡಾಂಬರೀಕರಣಗೊಳಿಸಲಾಗುವುದು. ಕಾಮಗಾರಿ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಾರದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸುಡಾ ಅಧ್ಯಕ್ಷ ಬಾಬುಗೌಡ ಬಾದರ್ಲಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿ ಮಲ್ಲಿಕ್ ವಕೀಲ, ತಾಪಂ ಮಾಜಿ ಉಪಾಧ್ಯಕ್ಷ ನಾಗಪ್ಪ ಗೋಮರ್ಸಿ, ಶರಣೇಗೌಡ, ಭೀಮಣ್ಣ ಬೆಳಗುರ್ಕಿ, ವೀರಭದ್ರಗೌಡ, ಲೋಕೋಪಯೋಗಿ ಇಲಾಖೆ ಎಇಇ ಸೂಗಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net