ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ

ಅಮರೇಶ ಬಿರಾದಾರ್
ಅಮರೇಶ ಬಿರಾದಾರ್
Published on

ಪ್ರಮುಖ ಮುಖ್ಯಾಂಶಗಳು

  • ಪ್ರತಿಯೊಬ್ಬ
  • ನಾಗರಿಕನ
  • ಹಬ್ಬ
ಅರಕೇರಾ: ಜಿಲ್ಲೆಯ ಸಾಂಸ್ಕೃತಿಕ ಹಿರಿಮೆ ಸಾರುವ ಎಡೆದೊರೆ ನಾಡು ರಾಯಚೂರು ಉತ್ಸವವನ್ನು ಸಂಭ್ರಮದಿಂದ ಆಚರಿಸಲು ಸಾರ್ವಜನಿಕರು ಕೈಜೋಡಿಸಬೇಕು ಎಂದು ತಹಸೀಲ್ದಾರ್ ಅಮರೇಶ ಬಿರಾದಾರ್ ಕರೆ ನೀಡಿದರು.
ಪಟ್ಟಣದ ತಹಸಿಲ್ ಕಚೇರಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ಜ.29 ರಿಂದ ಜ.31ರವರೆಗೆ ನಡೆಯಲಿರುವ ಉತ್ಸವವು ಜಿಲ್ಲೆಯ ಕಲೆ, ಸಾಹಿತ್ಯ ಮತ್ತು ಪರಂಪರೆಯನ್ನು ಅನಾವರಣಗೊಳಿಸಲಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ರಾಯಚೂರು ಉತ್ಸವವು ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ. ಇದು ಜಿಲ್ಲೆಯ ಪ್ರತಿಯೊಬ್ಬ ನಾಗರಿಕನ ಹಬ್ಬ. ಹೀಗಾಗಿ ಅರಕೇರಾ ತಾಲೂಕಿನ ಜನತೆ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು.
ಉತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗುವ ಮ್ಯಾರಾಥಾನ್, ಸೈಕ್ಲಿಂಗ್ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಸ್ಥಳೀಯ ಕಲಾತಂಡಗಳು ಮತ್ತು ಪ್ರತಿಭೆಗಳಿಗೆ ಈ ವೇದಿಕೆ ಉತ್ತಮ ಅವಕಾಶವಾಗಲಿದ್ದು, ತಾಲೂಕಿನ ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳು ಉತ್ಸಾಹದಿಂದ ಪಾಲ್ಗೊಳ್ಳುವಂತೆ ತಹಸೀಲ್ದಾರ್ ಕೋರಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net