ಅಪೌಷ್ಟಿಕತೆ ನಿವಾರಣೆಗೆ ಪೋಷಣಾ ಅಭಿಯಾನ

ದೇವದುರ್ಗದಲ್ಲಿ ವಿಶ್ವ ಪೌಷ್ಟಿಕಾಂಶ ದಿನಾಚರಣೆ ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶ ರಫೀಕ್ ಅಹ್ಮದ್  ಉದ್ಘಾಟಿಸಿದರು.
ದೇವದುರ್ಗದಲ್ಲಿ ವಿಶ್ವ ಪೌಷ್ಟಿಕಾಂಶ ದಿನಾಚರಣೆ ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶ ರಫೀಕ್ ಅಹ್ಮದ್ ಉದ್ಘಾಟಿಸಿದರು.
Published on
ದೇವದುರ್ಗ: ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಹಾಗೂ ರಕ್ತಹೀನತೆಯಿಂದ ಬಳಲುತ್ತಿರುವವರು ಪೌಷ್ಟಿಕ ಆಹಾರ ಸೇವನೆ ಮಾಡಬೇಕು ಎಂದು ಸಿವಿಲ್ ನ್ಯಾಯಾಧೀಶ ರಫೀಕ್ ಅಹ್ಮದ್ ಹೇಳಿದರು.
ಬಾಬುಜಗಜೀವನರಾಮ್ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ವಿಶ್ವ ಪೌಷ್ಟಿಕಾಂಶ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಬುಧವಾರ ಮಾತನಾಡಿದರು. ಮಕ್ಕಳು, ಮಹಿಳೆಯರು, ಗರ್ಭಿಣಿಯರಲ್ಲಿ ಕಂಡುಬರುವ ಅಪೌಷ್ಟಿಕ ಹಾಗೂ ಕಡಿಮೆ ತೂಕ ಹೋಗಲಾಡಿಸಲು ಪೋಷಣಾ ಅಭಿಯಾನ ಆಯೋಜಿಸಲಾಗುತ್ತಿದೆ. ಅಪೌಷ್ಟಿಕದಿಂದ ಬಳಲುವವರು ವಿವಿಧ ರೋಗಗಳಿಗೆ ಈಡಾಗುತ್ತಿದ್ದಾರೆ. ಅನಾರೋಗ್ಯವನ್ನು ಗುರುತಿಸಿ ಸಕಾಲದಲ್ಲಿ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರ ನೀಡಬೇಕಿದೆ ಎಂದರು.
ಗರ್ಭಿಣಿಯರು, ಬಾಣಂತಿಯರು, ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟಲು ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪೂರಕ ಪೌಷ್ಟಿಕ ಆಹಾರ ವಿತರಿಸಲಾಗುತ್ತಿದೆ. ರಕ್ತಹೀನತೆಯಿಂದ ಬಳಲುತ್ತಿರುವ ಮಕ್ಕಳ ಪಾಲಕರನ್ನು ಕರೆದು ತಿಳಿವಳಿಕೆ ನೀಡಲಾಗುತ್ತಿದೆ. ಫಲಾನುಭವಿಗಳು ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿಯರಾದ ಗಂಗಮ್ಮ ಕಾರ್ನೂರ್, ಲಕ್ಷ್ಮೀ ರಾಠೋಡ್, ನಿರ್ಮಲಾದೇವಿ, ಶರಣಮ್ಮ ರಾಥೋಡ್, ಮಾನಮ್ಮ, ಲತಾ, ವಕೀಲರಾದ ಚನ್ನಪ್ಪ ಗೆಜ್ಜೆಬಾವಿ, ವಸಂತ್ ಕುಮಾರ್ ಸೋಮನಮರಡಿ, ಗಂಗಮ್ಮ ಭೀಮೋಜಿ, ಪ್ರತಿಭಾ, ತಾಯಪ್ಪ, ಬಸವರಾಜ್, ರಂಗಪ್ಪ ಹೆಬೇರಿ, ಮಲ್ಲಿಕಾರ್ಜುನ ಮಿಯ್ಯಪುರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net