ಆರೋಗ್ಯಕ್ಕೆ ಪೌಷ್ಟಿಕ ಆಹಾರ ಅಗತ್ಯ

ಜವಳಗೇರಾದ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ನಿಮಿತ್ತ ಮಕ್ಕಳಿಗೆ ಮಾತ್ರೆ ನುಂಗಿಸಲಾಯಿತು. ಮುಖ್ಯಶಿಕ್ಷಕರಾದ ಜಿ.ಎಸ್.ಪಾಟೀಲ್, ಹನುಮಂತಪ್ಪ ನಾಯಕ, ವೈದಾಧಿಕಾರಿ ಉಮೈ ಅಮೇರಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಆರೋಗ್ಯ

ಆರೋಗ್ಯಕ್ಕೆ ಪೌಷ್ಟಿಕ ಆಹಾರ ಅಗತ್ಯ

ಸಿಂಧನೂರು: ಮಕ್ಕಳಲ್ಲಿ ರಕ್ತಹೀನತೆ ತಡೆಗಟ್ಟಲು ಆರು ತಿಂಗಳಿಗೊಮ್ಮೆ ಅಲ್ಬೆಂಡಜೋಲ್‌ಮಾತ್ರೆಯನ್ನು ತಪ್ಪದೆ ನೀಡಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದಾಧಿಕಾರಿ ಉಮೈ ಅಮೇರಾ ಹೇಳಿದರು.
ತಾಲೂಕಿನ ಜವಳಗೇರಾ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳು ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳಲು ಅಲ್ಬೆಂಡಜೋಲ್ ಜೋಲ್ ಮಾತ್ರೆಗಳನ್ನು ಸೇವಿಸುವುದು ಅಗತ್ಯ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೌಷ್ಟಿಕ ಆಹಾರ ಮುಖ್ಯ ಎಂದರು.
ಮುಖ್ಯಶಿಕ್ಷಕರಾದ ಜಿ.ಎಸ್.ಪಾಟೀಲ್, ಹನುಮಂತಪ್ಪ ನಾಯಕ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ರಾಧಾ ಕೊಂಡಿ, ಆರೋಗ್ಯ ನಿರೀಕ್ಷಣಾ ಅಧಿಕಾರಿ ಅಂಬಮ್ಮ, ಆಶಾ ಕಾರ್ಯಕರ್ತೆಯರಾದ ಹಂಪಮ್ಮ, ಶರಣಮ್ಮ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net