ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಮತ್ತು ಉಗುಳುವಿಕೆ ಪ್ರಕರಣಗಳು ಸ್ಕೈ-ವಾಕ್‌ಗಳ ಬಳಿ ಹೆಚ್ಚಾಗಿ ಕಂಡುಬರುತ್ತಿದ್ದು, ಇದು ನಗರದ ಸೌಂದರ್ಯಕ್ಕೆ ಧಕ್ಕೆ ತರುತ್ತಿದೆ. ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಭಾಗವಾಗಿ ನಗರದ 36 ವಾರ್ಡ್‌ಗಳಲ್ಲಿ ತೀವ್ರ ಸ್ವಚ್ಛತಾ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಜತೆಗೆ ವಾಟರ್ ಜೆಟಿಂಗ್ ಯಂತ್ರಗಳ ಮೂಲಕ ಪಾದಚಾರಿ ಮಾರ್ಗಗಳನ್ನು ಸ್ವಚ್ಛಗೊಳಿವುದು, ಪಾದಚಾರಿ ಮಾರ್ಗಗಳಲ್ಲಿರುವ ಸಸಿಗಳು ಮತ್ತು ಮರಗಳ ಸುತ್ತ ಗ್ರಾಸ್ ಪೇವರ್ ಅಳವಡಿಸಲಾಗಿದ್ದು, ನಗರದ ಸ್ವಚ್ಛತೆಗಾಗಿ ಕಾರ್ಯನಿರ್ವಹಿಸುವ ಎಲ್ಲಾ ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಿಸುವ ಜೊತೆಗೆ ಅಗತ್ಯ ಸುರಕ್ಷತಾ ಉಪಕರಣಗಳನ್ನು ಒದಗಿಸಲಾಗಿದ್ದು, ಜತೆಗೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿ ನಾಗರಿಕರಲ್ಲಿ ಸ್ವಚ್ಛ ಸರ್ವೇಕ್ಷಣ ಅಭಿಯಾನದ ಕುರಿತು ಅರಿವು ಮೂಡಿಸುವ ಕೆಲಸ ಪಾಲಿಕೆ ಅಧಿಕಾರಿಗಳು ಮಾಡುತ್ತಿದ್ದಾರೆ.