ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ನೇತೃತ್ವದಲ್ಲಿ ನಡೆಯಲಿರುವ ಅಭಿನಂದನಾ ಸಮಾರಂಭದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸರಿ ಸುಮಾರು 25 ಸಾವಿರ ಸರ್ಕಾರಿ ನೌಕರರು ಭಾಗವಹಿಸುವ ನಿರೀಕ್ಷೆಯಿದೆ. ಅಭಿನಂದನಾ ಸಮಾರಂಭದಲ್ಲಿ ಹಕ್ಕೋತ್ತಾಯದ ಮನವಿಯನ್ನು ಸಹ ಸಲ್ಲಿಸಲಾಗುತ್ತದೆ. ಎನ್‌ಪಿಎಸ್ ರದ್ದುಗೊಲಿಸಿ ಓಪಿಎಸ್ ಪ್ರಾರಂಭಿಸುವದು, ಏಳನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರಿ ನೌಕರರ ವೇತನದಂತೆ ರಾಜ್ಯ ಸರ್ಕಾರಿ ನೌಕರರು ವೇತನ ಅನ್ವಯಿಸುವಂತೆ ಆಗ್ರಹಿಸಲಾಗುತ್ತದೆ ಎಂದರು.