ಐಸಿಡಿಎಸ್‌ಗೆ ಅನುದಾನ ನೀಡದ್ದಕ್ಕೆ ಆಕ್ರೋಶ

ದೇವದುರ್ಗದಲ್ಲಿ ಅಂಗನವಾಡಿ ನೌಕರರ ಸಂಘ ಮಂಗಳವಾರ ಕೇಂದ್ರ ಬಜೆಟ್ ಪ್ರತಿ ಸುಟ್ಟು ಪ್ರತಿಭಟನೆ ನಡೆಸಿತು. ಅಧ್ಯಕ್ಷೆ ರಂಗಮ್ಮ, ಕಾರ್ಯದರ್ಶಿ ರಮಾದೇವಿ, ಪದಾಧಿಕಾರಿಗಳಾದ ಚಂದ್ರಕಲಾ, ರೇಣುಕಾ, ಬಸ್ಸಮ್ಮ, ಸುಮಂಗಲಾ, ಹನುಮಂತಿ, ರಂಗಮ್ಮ ಅರಸಿಣಿಗೆ, ನಿರ್ಮಲಾ, ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ ಇತರರಿದ್ದರು.

Published on
ದೇವದುರ್ಗ: ಕೇಂದ್ರ ಸರ್ಕಾರ ಫೆ.1ರಂದು ಮಂಡಿಸಿದ ಬಜೆಟ್‌ನಲ್ಲಿ ಐಸಿಡಿಎಸ್ ಯೋಜನೆಗೆ ಯಾವುದೇ ಅನುದಾನ ಘೋಷಿಸಿಲ್ಲವೆಂದು ಆರೋಪಿಸಿ ಪಟ್ಟಣದ ಜೆಪಿ ವೃತ್ತದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)ದ ಪದಾಧಿಕಾರಿಗಳು ಆಯವ್ಯಯ ಪ್ರತಿ ಸುಟ್ಟುಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಗಿರಿಯಪ್ಪ ಪೂಜಾರಿ ಮಾತನಾಡಿ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ ಬಜೆಟ್ ದುಡಿಯುವ ವರ್ಗಕ್ಕೆ ಮರಣ ಶಾಸನವಾಗಿದೆ. ಶಿಶು ಅಭಿವೃದ್ಧಿ ಉದ್ದೇಶ ಹೊಂದಿರುವ ಯೋಜನೆಗಳಿಗೆ ಬಜೆಟ್‌ನಲ್ಲಿ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸಿದೆ.
 ಆ ಮೂಲಕ ಐಸಿಡಿಎಸ್ ಯೋಜನೆ ರದ್ದುಮಾಡುವ ಹುನ್ನಾರ ನಡೆಸಿದೆ. ಈ ಯೋಜನೆ ನಗರ ಸೇರಿ ಗ್ರಾಮೀಣ ಭಾಗದ ಮಕ್ಕಳು ಹಾಗೂ ಮಹಿಳೆಯರ ಆರೋಗ್ಯ ಕಾಪಾಡುವಲ್ಲಿ ಬಹುಮುಖ್ಯ ಪಾತ್ರವಹಿಸಿದೆ. ಆದರೆ, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನುದಾನ ನೀಡದೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಸರ್ಕಾರ ಐಸಿಡಿಎಸ್ ಯೋಜನೆಗೆ ವಿಶೇಷ ಅನುದಾನ ಘೋಷಣೆ ಮಾಡಬೇಕು. ದುಡಿಯುವ ಕಾರ್ಮಿಕ ವರ್ಗಕ್ಕೆ ಆದ್ಯತೆ ನೀಡಬೇಕು. ಶಿಶು ಅಭಿವೃದ್ಧಿ ಯೋಜನೆ ಬಲಪಡಿಸಬೇಕು ಎಂದು ಒತ್ತಾಯಿಸಿದರು.  
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net