ಸ್ಥಳೀಯ ಅಭಿವೃದ್ಧಿಯಲ್ಲಿ ಭಾಗಿದಾರಿಕೆ

ಮುದಗಲ್ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಭಾರತ್ ಜೋಡೋ ಸಂಘಗಳಿಗೆ ವಿದ್ಯಾರ್ಥಿಗಳ ನೋಂದಣಿ ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಪ್ರವೀಣ್ ಭೋಗಾರ ಮಾತನಾಡಿದರು. ಪ್ರಾಚಾರ್ಯ ಸಿದ್ಧರಾಮ ಪಾಟೀಲ್, ಪುರಸಭೆ ಕಂದಾಯ ನಿರೀಕ್ಷಕ ಅಂತೋನಿರಾಜ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಪುರಸಭೆ ಮುಖ್ಯಾಧಿಕಾರಿ ಪ್ರವೀಣ್ ಮಾಹಿತಿ
  • ಮುದಗಲ್ ಭಾರತ್ ಜೋಡೋ ಪ್ರಕ್ರಿಯೆ ಸಭೆ
ಮುದಗಲ್: ಯುವಸಮೂಹ ಭಾರತ್ ಜೋಡೋ ಯುವ ಸಂಘಗಳಿಗೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಪ್ರವೀಣ್ ಭೋಗಾರ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತ್ ಜೋಡೋ ಯುವ ಸಂಘ ರಚನೆ ನೋಂದಣಿ ಪ್ರಕ್ರಿಯೆ ಸಭೆಯಲ್ಲಿ ಮಾತನಾಡಿದರು. ಯುವಜನಾಂಗ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘ ರಚನೆ ಮತ್ತು ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಕ್ರೀಡೆ, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಉತ್ತೇಜಿಸುವುದು, ಸಂವಿಧಾನ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವುದು, ಪರಿಸರ ಮತ್ತು ಪ್ರಕೃತಿಯ ಸಂರಕ್ಷಣೆ, ಸಾಮಾಜಿಕ ಸೌಹಾರ್ದ ಮತ್ತು ಸಹಬಾಳ್ವೆ ಬೆಳೆಸುವುದು, ಸ್ಥಳೀಯ ಅಭಿವೃದ್ಧಿಯಲ್ಲಿ ಯುವಕ-ಯುವತಿಯರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಸಂಘದ ಪ್ರಮುಖ ಉದ್ದೇಶವಾಗಿದೆ ಎಂದರು.
ಪ್ರಾಚಾರ್ಯ ಸಿದ್ಧರಾಮ ಪಾಟೀಲ್, ಪುರಸಭೆ ವ್ಯವಸ್ಥಾಪಕ ಜಗದೀಶ್ ಜಿ.ಬಿರಾದಾರ, ಕಂದಾಯ ನಿರೀಕ್ಷಕ ಅಂತೋನಿರಾಜ, ಕರ ವಸೂಲಿಗಾರ ವೀರೇಶ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net