ಮರ್ಯಾದಗೇಡು ಹತ್ಯೆ ಘಟನೆ ಖಂಡಿಸಿ ಜನವಾದಿ ಮಹಿಳಾ ಸಂಘಟನೆ ಶುಕ್ರವಾರ ಸಿಂಧನೂರಿನ ತಹಸಿಲ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು. ಸಂಘದ ಜಿಲ್ಲಾಧ್ಯಕ್ಷೆ ಶಕುಂತಲಾ ಪಾಟೀಲ್, ತಾಲೂಕಾಧ್ಯಕ್ಷೆ ಗಿರಿಜಾ ಕಿಲ್ಲೇದ, ಪ್ರಧಾನ ಕಾರ್ಯದರ್ಶಿ ಸಿದ್ದೇಶ್ವರಿ, ನಾಗರತ್ನಾ ತುರ್ವಿಹಾಳ ಇದ್ದರು.
Published on:
Copied
Follow Us
ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನು ಮದುವೆಯಾಗಿ ಏಳು ತಿಂಗಳು ಗರ್ಭಿಣಿಯನ್ನು ತಂದೆ ಹಾಗೂ ಕುಟುಂಬಸ್ಥರು ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಇದು ನಾಗರಿಕ ಸಮಾಜಕ್ಕೆ ಆಘಾತ ಉಂಟು ಮಾಡಿದೆ. ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸುವುದು ಮತ್ತು ದೌರ್ಜನ್ಯವನ್ನು ತಡೆಗಟ್ಟಲು ನ್ಯಾ.ಜಿ.ಎಸ್.ವರ್ಮಾ ಸಮಿತಿ ಹಾಗು ಉಗ್ರಪ್ಪ ಸಮಿತಿಯ ಮಹಿಳಾ ಪರ ಕಾನೂನು ಶಿಫಾರಸುಗಳನ್ನು ತ್ವರಿತವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.