ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಸಂಕಷ್ಟ

ಸಿಂಧನೂರಿನಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಗ್ರಾಮೀಣ ಘಟಕ ಅಧ್ಯಕ್ಷ ಹನುಮೇಶ ಕರ್ನಿ, ಯುವ ಕಾಂಗ್ರೆಸ್ ತಾಲೂಕಾಧ್ಯಕ್ಷ ಯುಸೂಫ್ ಎತ್ಮಾರಿ, ಖಾಜಾ ಹುಸೇನ್ ರೌಡಕುಂದಾ, ಅಮರೇಶ ಗಿರಿಜಾಲಿ ಇತರರಿದ್ದರು.
ಸಿಂಧನೂರಿನಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಗ್ರಾಮೀಣ ಘಟಕ ಅಧ್ಯಕ್ಷ ಹನುಮೇಶ ಕರ್ನಿ, ಯುವ ಕಾಂಗ್ರೆಸ್ ತಾಲೂಕಾಧ್ಯಕ್ಷ ಯುಸೂಫ್ ಎತ್ಮಾರಿ, ಖಾಜಾ ಹುಸೇನ್ ರೌಡಕುಂದಾ, ಅಮರೇಶ ಗಿರಿಜಾಲಿ ಇತರರಿದ್ದರು.
Published on
ಸಿಂಧನೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಕೇಂದ್ರ ಸರ್ಕಾರದ ಆಡಳಿತದ ವೈಫಲ್ಯ ಖಂಡಿಸಿ ಗ್ರಾಮೀಣ ಮತ್ತು ನಗರ ಯುವ ಕಾಂಗ್ರೆಸ್ ಸಮಿತಿ, ಎನ್‌ಎಸ್‌ಯುಐ ಘಟಕದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಎಂಎಲ್ಸಿ ಬಸನಗೌಡ ಬಾದರ್ಲಿ ಕಚೇರಿಯಿಂದ ತಹಸಿಲ್ ಕಚೇರಿವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಲಾಯಿತು. ಬಳಿಕ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಬೆಲೆಯನ್ನು ನಿರಂತರ ಏರಿಕೆ ಮಾಡುತ್ತಿರುವುದರಿಂದ ಎಲ್ಲದರ ಬೆಲೆಯೂ ಏರಿಕೆಯಾಗಿದೆ. ಇದರಿಂದ ಬಡವರು ಸಂಕಷ್ಟ ಎದುರಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 
ಗ್ರಾಮೀಣ ಘಟಕ ಅಧ್ಯಕ್ಷ ಹನುಮೇಶ ಕರ್ನಿ, ಯುವ ಕಾಂಗ್ರೆಸ್ ತಾಲೂಕಾಧ್ಯಕ್ಷ ಯುಸೂಫ್ ಎತ್ಮಾರಿ, ಮುಖಂಡರಾದ ಖಾಜಾ ಹುಸೇನ್ ರೌಡಕುಂದಾ, ಅಮರೇಶ ಗಿರಿಜಾಲಿ, ಹಬೀಬ್ ಖಾಜಿ, ಬಸವರಾಜ ಟೇಲರ್, ಎನ್‌ಯುಸಿಐ ಘಟಕ ಅಧ್ಯಕ್ಷ ಸುದೀಪ್ ಇತರರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net