ಕೆಳಭಾಗಕ್ಕೆ ನೀರು ಹರಿಸಿ

ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯಿಂದ ಶನಿವಾರ ಸಿರವಾರ ತಹಸೀಲ್ದಾರ್ ಅಶೋಕ ಪವಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಮಲ್ಲನಗೌಡ ಅಂಚೆಸಗೂರು, ದುರ್ಗಣ್ಣ ಅಡಕಲಗುಡ್ಡ, ಆದ್ಯಪ್ಪ ಕಲ್ಲೂರು, ವೀರೇಶ ಜಕ್ಕಲದಿನ್ನಿ ಇದ್ದರು.
ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯಿಂದ ಶನಿವಾರ ಸಿರವಾರ ತಹಸೀಲ್ದಾರ್ ಅಶೋಕ ಪವಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಮಲ್ಲನಗೌಡ ಅಂಚೆಸಗೂರು, ದುರ್ಗಣ್ಣ ಅಡಕಲಗುಡ್ಡ, ಆದ್ಯಪ್ಪ ಕಲ್ಲೂರು, ವೀರೇಶ ಜಕ್ಕಲದಿನ್ನಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಘೋಷಿಸಿ,
  • ಬರಪೀಡಿತ
  • ಬೇಡಿಕೆ
ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆ ಕೆಳಭಾಗಕ್ಕೆ ಸಮರ್ಪಕ ನೀರು ಹರಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯಿಂದ ಶನಿವಾರ ತಹಸೀಲ್ದಾರ್ ಅಶೋಕ ಪವಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ತಾಲೂಕಿನಲ್ಲಿ ಮಳೆ ಅಭಾವದಿಂದ ಬೆಳೆಗಳು ಒಣಗಿ ನಾಶವಾಗಿವೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿದ್ದ 2.73 ಲಕ್ಷ ಹೆಕ್ಟೇರ್ ಪೈಕಿ 1.60 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಸಂಪೂರ್ಣ ಹಾನಿಯಾಗಿದೆ. ಸಿರವಾರ ತಾಲೂಕನ್ನು ತೀವ್ರ ಬರಪೀಡಿತ ಎಂದು ಘೋಷಿಸಿ, ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ 50,000 ರೂಪಾಯಿ ಪರಿಹಾರ ನೀಡಬೇಕು ಹಾಗೂ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು. ಕಳೆದ 5-6 ತಿಂಗಳಿಂದ ಸ್ಥಗಿತಗೊಂಡಿರುವ ವೃದ್ಧಾಪ್ಯ, ವಿಧವೆ ಹಾಗೂ ವಿಕಲಾಂಗರ ಪಿಂಚಣಿಯನ್ನು ತಕ್ಷಣವೇ ಬಿಡುಗಡೆ ಮಾಡಬೇಕು.
ಪಿಂಚಣಿ ಮರುಪರಿಶೀಲನೆಗಾಗಿ ಗ್ರಾಪಂ, ತಾಲೂಕು ಮತ್ತು ನಾಡಕಚೇರಿಗಳಲ್ಲಿ ಪ್ರತ್ಯೇಕ ಸಿಬ್ಬಂದಿ ನೇಮಿಸಿ ಪ್ರಕ್ರಿಯೆ ತ್ವರಿತಗೊಳಿಸಬೇಕು. ಬರ ಹಿನ್ನೆಲೆಯಲ್ಲಿ ವಿಬಿ ರಾಮ್ ಜಿ ಯೋಜನೆಯಡಿ ಕೆಲಸದ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಮಲ್ಲನಗೌಡ ಅಂಚೆಸಗೂರು, ಜಿಲ್ಲಾ ಉಪಾಧ್ಯಕ್ಷ ದುರ್ಗಣ್ಣ ಅಡಕಲಗುಡ್ಡ, ತಾಲೂಕು ಕಾರ್ಯದರ್ಶಿ ಆದ್ಯಪ್ಪ ಕಲ್ಲೂರು, ತಾಲೂಕು ಉಪಾಧ್ಯಕ್ಷ ವೀರೇಶ ಜಕ್ಕಲದಿನ್ನಿ, ಹನುಮಯ್ಯ ಕಲ್ಲೂರು, ಸಿದ್ದರಾಮರೆಡ್ಡಿ ಜಕ್ಕಲದಿನ್ನಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net