ಆಡಳಿತದಲ್ಲಿ ಪಾರದರ್ಶಕಕ್ಕಾಗಿ ಪ್ರಜಾಸೇವೆ ಸಹಕಾರಿ

ಲಿಂಗಸುಗೂರಿನಲ್ಲಿ ತಹಸೀಲ್ದಾರ್ ಸತ್ಯಮ್ಮ ಅಧ್ಯಕ್ಷತೆಯಲ್ಲಿ ಪ್ರಜಾಸೇವಾ ಅಭಿಯಾನದ ಪೂರ್ವಭಾವಿ ಸಭೆ ನಡೆಯಿತು.
ಲಿಂಗಸುಗೂರಿನಲ್ಲಿ ತಹಸೀಲ್ದಾರ್ ಸತ್ಯಮ್ಮ ಅಧ್ಯಕ್ಷತೆಯಲ್ಲಿ ಪ್ರಜಾಸೇವಾ ಅಭಿಯಾನದ ಪೂರ್ವಭಾವಿ ಸಭೆ ನಡೆಯಿತು.
Published on
ಲಿಂಗಸುಗೂರು: ಸಾರ್ವಜನಿಕರ ಕುಂದು ಕೊರತೆಯನ್ನು ನೇರವಾಗಿ ಕೇಳಿ ಕಾಲಮಿತಿಯಲ್ಲಿ ಪರಿಹಾರ ಒದಗಿಸುವ ಪ್ರಜಾ ಸೇವಾ ಅಭಿಯಾನಕ್ಕೆ ಸೆ.5 ರಂದು ಪಟ್ಟಣದ ಪದವಿಪೂರ್ವ ಕಾಲೇಜಿನಲ್ಲಿ ಚಾಲನೆ ನೀಡಲಾಗುವುದು ಎಂದು ತಹಸೀಲ್ದಾರ್ ಸತ್ಯಮ್ಮ ಹೇಳಿದರು.
ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿದರು. ಅಭಿಯಾನ ಯಶಸ್ವಿಯಾಗಲು ಅಧಿಕಾರಿಗಳು ಜವಾಬ್ದಾರಿಯನ್ನು ಅಚ್ಚಕಟ್ಟಾಗಿ ನಿಭಾಯಿಸಬೇಕು. ಸಣ್ಣಪುಟ್ಟ ಸಮಸ್ಯೆಗಳಿಗೂ ಜನರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು, ನಾನಾ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಿ ಕಾಲಮಿತಿಯಲ್ಲಿ ವಿಲೇವಾರಿ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಉತ್ತರದಾಯಿತ್ವವನ್ನು ಹೆಚ್ಚಿಸುವುದು ಅಭಿಯಾನದ ಉದ್ದೇಶವಾಗಿದೆ. ಇದಕ್ಕಾಗಿಯೇ ಸರ್ಕಾರ ಪ್ರಜಾಸೇವೆ ಇಲಾಖೆ ಸೃಷ್ಟಿಸಿದೆ ಎಂದರು.
ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ, ಎರಡನೇ ಮತ್ತು ನಾಲ್ಕನೇ ಶನಿವಾರದಂದು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುವುದು. ಸೆ.5 ರಂದು ಸ್ಥಳೀಯ ಶಾಸಕರು ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಕಾರ್ಮಿಕ ಅಧಿಕಾರಿ ಶಾಂತಮೂರ್ತಿ, ಸಮಾಜ ಕಲ್ಯಾಣ ಅಧಿಕಾರಿ ರವೀಂದ್ರ ಉಪ್ಪಾರ, ಅಬಕಾರಿ ಇನ್‌ಸ್ಪೆಕ್ಟರ್ ಲಕ್ಷ್ಮೀದೇವಿ, ಪಶು ವೈದ್ಯಾಧಿಕಾರಿ ಅಮರೇಗೌಡ, ಬಿಸಿಎಂ ಅಧಿಕಾರಿ ಮರಿಯಮ್ಮ, ಅಲ್ಪಸಂಖ್ಯಾತ ಇಲಾಖೆ ಅಧಿಕಾರಿ ಷಡಕ್ಷರಿ ಹಾದಿಮನಿ, ಲೋಕೋಪಯೋಗಿ ಇಲಾಖೆಯ ಭಾಗ್ಯಶ್ರೀ, ಎಪಿಎಂಸಿಯ ಭಾರತಿ, ಸಿಆರ್‌ಪಿ ಮೌನೇಶ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net